ಸಾಂದರ್ಭಿಕ ಚಿತ್ರ (AI)

ಚಿನ್ನ-ಬೆಳ್ಳಿ ಬೆಲೆಗಳ ಮೇಲೆ ಹೆಚ್ಚಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳ ಪ್ರಭಾವ ಇರುತ್ತವೆ.

ಚಿನ್ನದ ದರ ಆಗಸ್ಟ್ ಮೊದಲ ವಾರದಿಂದಲೇ ಏರಿಕೆಯಾಗಿ ಟ್ರೆಂಡ್ ಇಡೀ ತಿಂಗಳು ಮುಂದುವರಿದಿತ್ತು. ನಂತರ ಆಗಸ್ಟ್ ಕೊನೆ ವಾರ ಮತ್ತು ಸೆಪ್ಟೆಂಬರ್ 1ರಿಂದ ಚಿನ್ನದ ದರ ತೀವ್ರ ಕುಸಿತದ ಹಾದಿಯಲ್ಲಿದೆ. ನಡುವೆ ಒಂದೆರಡು ಬಾರಿ ಸ್ವಲ್ಪ ಏರಿಕೆಯಾಗಿದ್ದರೂ, ಕಳೆದ ಶನಿವಾರ ಮತ್ತು ಇದೇ ಸೋಮವಾರ ಬೆಲೆ ಇಳಿಕೆಯಾಗಿದೆ. ಮಂಗಳವಾರ ಮತ್ತು ಗುರುವಾರದಂದು ಸ್ವಲ್ಪ ಮಟ್ಟಿಗೆ ಬೆಲೆಯಲ್ಲಿ ಏರಿಕೆ ಕಂಡುಬಂದಿತ್ತು. ಇದೀಗ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ ಕಂಡುಬಂದಿರುವುದು ಹಬ್ಬದ ದಿನಗಳಲ್ಲಿ ಗ್ರಾಹಕರಲ್ಲಿ ನಿರಾಳತೆ ಮೂಡಿಸಿತ್ತು. ಶನಿವಾರ ಬೆಲೆ ಮತ್ತೆ ಸ್ವಲ್ಪ ಏರಿಕೆ ಕಂಡುಬಂದಿದೆ.

ಚಿನ್ನ-ಬೆಳ್ಳಿ ದರಗಳು ಅನೇಕ ಕಾರಣಗಳಿಂದ ಪ್ರಭಾವಿತವಾಗುತ್ತಿವೆ. ದರ ಏರಿಕೆ, ತೈಲ ಬೆಲೆ ಮತ್ತು ಭೌಗೋಳಿಕ- ರಾಜಕೀಯ ಅಪಾಯಗಳಿಂದ ಪರಿಣಾಮವಾಗುತ್ತಿವೆ. ಮುಂದಿನ ದಿನಗಳಲ್ಲಿ ಈ ಅಂಶಗಳ ಸಂಯೋಜನೆ ಮಾರುಕಟ್ಟೆಯ ದಿಕ್ಕು ನಿರ್ಧರಿಸಲಿದೆ.

ಚಿನ್ನದ ದರದಲ್ಲಿ ಸ್ವಲ್ಪ ಏರಿಕೆ

ಸೆಪ್ಟೆಂಬರ್ 12ರಂದು ಶನಿವಾರ 11 ಗಂಟೆಯ ವಹಿವಾಟಿನಲ್ಲಿ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಶುಕ್ರವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 16 ರೂ. ಏರಿಕೆಯಾಗಿದ್ದು, ಹತ್ತು ಗ್ರಾಂ ಬೆಲೆ 1,54,580 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 15 ರೂ. ಏರಿದ್ದು, ಹತ್ತು ಗ್ರಾಂಗೆ 1,41,700 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 12 ರೂ. ಹೆಚ್ಚಾಗಿ, ಹತ್ತು ಗ್ರಾಂಗೆ 1,15,940 ರೂ. ಗೆ ತಲುಪಿದೆ.

ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?

ಸೆಪ್ಟೆಂಬರ್ 12ರಂದು ಶನಿವಾರ ಬೆಳಗಿನ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಸ್ವಲ್ಪ ಏರಿಕೆ ದಾಖಲಿಸಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 15,458 (+16) ರೂ. ರಷ್ಟಕ್ಕೆ ತಲುಪಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,170 (+15) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,594 (+12) ರೂ. ಬೆಲೆಗೆ ಬಂದು ನಿಂತಿದೆ.

ಸ್ಥಿರವಾದ ಬೆಳ್ಳಿಯ ದರ

ಮಂಗಳೂರಿನಲ್ಲಿ ಜುಲೈ 11ರಿಂದ ಬೆಳ್ಳಿಯ ದರ ಬಹುತೇಕ ಪ್ರತಿ ಕೆಜಿಗೆ 2,35,000 ರೂ.ಗೆ ಸ್ಥಿರವಾಗಿತ್ತು. ಆದರೆ ಆಗಸ್ಟ್ ಆರಂಭದ ವಾರಗಳಲ್ಲಿ ಮತ್ತೆ ಏರಿಕೆಯಾಗಿ ಪ್ರತಿ ಕೆಜಿಗೆ 2,60,000 ರೂ. ವರೆಗೆ ಏರಿತ್ತು. ಆಗಸ್ಟ್ ಕೊನೆ ವಾರದಲ್ಲಿ ಮತ್ತು ಸೆಪ್ಟೆಂಬರ್ ಆರಂಭದಲ್ಲಿ ಬೆಳ್ಳಿಯ ದರ ಕುಸಿದು ಪ್ರತಿ ಕೆಜಿಗೆ 2,45,000 ರೂ.ಗೆ ಬಂದು ನಿಂತಿತ್ತು. ಕಳೆದ ಗುರುವಾರದಿಂದ ಪ್ರತಿ ಕೆಜಿ ಬೆಳ್ಳಿದರ 2,50,000 ರೂ.ಗೆ ಬಂದು, ಅದೇ ಬೆಲೆಯಲ್ಲಿ ಸ್ಥಿರವಾಗಿತ್ತು. ಆದರೆ ನಿನ್ನೆ ಶುಕ್ರವಾರ ಮತ್ತೆ ಪ್ರತಿ ಗ್ರಾಂ ಬೆಳ್ಳಿ ದರ 10 ರೂ. ಕುಸಿತ ಕಂಡು ಪ್ರತಿ ಕೆಜಿಗೆ 2,45,000 ರೂ.ಗೆ ಬಂದು ತಲುಪಿದೆ. ಶನಿವಾರ ಅದೇ ಬೆಲೆಗೆ ಸ್ಥಿರವಾಗಿದೆ.

ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?

ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 15,473 (+16) ರೂ., 22 ಕ್ಯಾರೆಟ್ ಚಿನ್ನದ ದರ 14,185 (+15) ರೂ.

ಮುಂಬೈ: 24 ಕ್ಯಾರೆಟ್ ಚಿನ್ನದ ದರ 15,458 (+16) ರೂ., 22 ಕ್ಯಾರೆಟ್ ಚಿನ್ನದ ದರ 14,170 (+15) ರೂ.

ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 15,463 (+16) ರೂ., 22 ಕ್ಯಾರೆಟ್ ಚಿನ್ನದ ದರ 14,175 (+15) ರೂ.

ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 15,458 (+16) ರೂ., 22 ಕ್ಯಾರೆಟ್ ಚಿನ್ನದ ದರ 14,170 (+15) ರೂ.

ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 15,458 (+16) ರೂ., 22 ಕ್ಯಾರೆಟ್ ಚಿನ್ನದ ದರ 14,170 (+15) ರೂ.

ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 15,458 (+16) ರೂ., 22 ಕ್ಯಾರೆಟ್ ಚಿನ್ನದ ದರ 14,170 (+15) ರೂ.

ಜೈಪುರ: 24 ಕ್ಯಾರೆಟ್ ಚಿನ್ನದ ದರ 15,473 (+16) ರೂ., 22 ಕ್ಯಾರೆಟ್ ಚಿನ್ನದ ದರ 14,185 (+15) ರೂ.

ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 15,473 (+16) ರೂ., 22 ಕ್ಯಾರೆಟ್ ಚಿನ್ನದ ದರ 14,185 (+15) ರೂ.

ಲಕ್ನೋ: 24 ಕ್ಯಾರೆಟ್ ಚಿನ್ನದ ದರ 15,473 (+16) ರೂ., 22 ಕ್ಯಾರೆಟ್ ಚಿನ್ನದ ದರ 14,185 (+15) ರೂ.

ಕೊಚ್ಚಿ: 24 ಕ್ಯಾರೆಟ್ ಚಿನ್ನದ ದರ 15,458 (+16) ರೂ., 22 ಕ್ಯಾರೆಟ್ ಚಿನ್ನದ ದರ 14,170 (+15) ರೂ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor