2013ರ ಅತ್ಯಾಚಾರ ಪ್ರಕರಣ | ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ : ಬಾಂಬೆ ಹೈಕೋರ್ಟ್ ತೀರ್ಪು

Update: 2026-08-06 11:15 IST

Photo| indiatoday

ಮುಂಬೈ: 2013ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಹಲ್ಕಾ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಅವರನ್ನು ಬಾಂಬೆ ಹೈಕೋರ್ಟ್ ಗುರುವಾರ ದೋಷಿಯೆಂದು ತೀರ್ಪು ನೀಡಿದೆ. ಇದರೊಂದಿಗೆ, 2021ರಲ್ಲಿ ಗೋವಾದ ವಿಚಾರಣಾ ನ್ಯಾಯಾಲಯ ನೀಡಿದ್ದ ಖುಲಾಸೆ ತೀರ್ಪನ್ನು ರದ್ದುಗೊಳಿಸಿದೆ. ಶಿಕ್ಷೆಯ ಪ್ರಮಾಣವನ್ನು ಮಧ್ಯಾಹ್ನ 2.30ಕ್ಕೆ ಪ್ರಕಟಿಸಲಿದೆ.  

ಪ್ರಕರಣವು 2013ರ ನವೆಂಬರ್‌ನಲ್ಲಿ ಗೋವಾದಲ್ಲಿ ನಡೆದಿದ್ದ ಥಿಂಕ್‌ಫೆಸ್ಟ್ ಕಾರ್ಯಕ್ರಮಕ್ಕೆ ಸಂಬಂಧಿಸಿದೆ. ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಗೋವಾದ ರೆಸಾರ್ಟ್‌ನ ಲಿಫ್ಟ್‌ನಲ್ಲಿ ತನ್ನ ಮೇಲೆ ತರುಣ್ ತೇಜ್‌ಪಾಲ್ ಅತ್ಯಾಚಾರ ಎಸಗಿದ್ದಾರೆ ಎಂದು ತೆಹಲ್ಕಾದ ಮಹಿಳಾ ಉದ್ಯೋಗಿಯೊಬ್ಬರು ಆರೋಪಿಸಿದ್ದರು. ಈ ದೂರಿನ ಆಧಾರದಲ್ಲಿ ಗೋವಾ ಪೊಲೀಸರು ಅವರ ವಿರುದ್ಧ ಅತ್ಯಾಚಾರ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಗೋವಾದ ವಿಚಾರಣಾ ನ್ಯಾಯಾಲಯವು 2021ರಲ್ಲಿ ತರುಣ್ ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಗೋವಾ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಖುಲಾಸೆ ತೀರ್ಪನ್ನು ರದ್ದುಗೊಳಿಸಿ ತೇಜ್‌ಪಾಲ್ ಅವರನ್ನು ದೋಷಿಯೆಂದು ಘೋಷಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News