×
Ad

ಆನ್‌ಲೈನ್‌ ಮೂಲಕ ಗ್ರಾಹಕರ ಸೇರ್ಪಡೆ, ಕ್ರೆಡಿಟ್‌ ಕಾರ್ಡ್‌ ವಿತರಣೆಯನ್ನು ನಿಲ್ಲಿಸುವಂತೆ ಕೋಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ಆದೇಶ

Update: 2024-04-24 17:06 IST

ಸಾಂದರ್ಭಿಕ ಚಿತ್ರ (Credit: telegraphindia.com)

ಹೊಸದಿಲ್ಲಿ: ಆನ್‌ಲೈನ್ ಮತ್ತು ಮೊಬೈಲ್ ಬ್ಯಾಂಕಿಂಗ್ ಚಾನೆಲ್‌ಗಳ ಮೂಲಕ ಹೊಸ ಗ್ರಾಹಕರನ್ನು ಸೇರಿಸಿಕೊಳ್ಳುವುದನ್ನು ತಕ್ಷಣವೇ ನಿಲ್ಲಿಸುವಂತೆ ಮತ್ತು ಹೊಸ ಕ್ರೆಡಿಟ್ ಕಾರ್ಡ್‌ಗಳನ್ನು ನೀಡುವುದನ್ನು ನಿಲ್ಲಿಸುವಂತೆ ಕೋಟಕ್ ಮಹೀಂದ್ರಾ ಬ್ಯಾಂಕ್‌ಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸೂಚನೆ ನೀಡಿದೆ.

ಬ್ಯಾಂಕಿನ ಅನುಸರಣೆ ಮತ್ತು ಕಾರ್ಯನಿರ್ವಹಣೆಯ ಬಗ್ಗೆ ಕಳವಳದಿಂದಾಗಿ ಈ ನಿಯಂತ್ರಕ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಆದಾಗ್ಯೂ, ತನ್ನ ಕ್ರೆಡಿಟ್ ಕಾರ್ಡ್ ಗ್ರಾಹಕರು ಸೇರಿದಂತೆ ಅಸ್ತಿತ್ವದಲ್ಲಿರುವ ತನ್ನ ಗ್ರಾಹಕರಿಗೆ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸಲು ಕೋಟಕ್ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ನಿರ್ದೇಶಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News