×
Ad

ಅಸ್ಸಾಂ | ನಾಗರಿಕ ಸೇವಾಧಿಕಾರಿಯ ನಿವಾಸದ ಮೇಲೆ ದಾಳಿ : 2 ಕೋಟಿ ರೂ. ನಗದು, ಅಪಾರ ಚಿನ್ನಾಭರಣ ವಶಕ್ಕೆ

Update: 2025-09-16 18:43 IST

Photo | Moneycontrol

ಗುವಾಹಟಿ : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಲ್ಲಿ ಅಸ್ಸಾಂ ನಾಗರಿಕ ಸೇವಾ ಅಧಿಕಾರಿಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಮುಖ್ಯಮಂತ್ರಿಯವರ ವಿಶೇಷ ಜಾಗೃತ ದಳದ ಅಧಿಕಾರಿಗಳ ತಂಡ ಅಸ್ಸಾಂ ನಾಗರಿಕ ಸೇವಾ ಅಧಿಕಾರಿ ನೂಪುರ್ ಬೋರಾ ಅವರ ಗುವಾಹಟಿ ನಿವಾಸದ ಮೇಲೆ ದಾಳಿ ನಡೆಸಿ ಸುಮಾರು 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು 2 ಕೋಟಿ ರೂ.ನಗದು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ ಬಾರ್ಪೇಟಾದಲ್ಲಿರುವ ನೂಪುರ್ ಬೋರಾ ಅವರ ಬಾಡಿಗೆ ಮನೆಯಲ್ಲಿಯಲ್ಲಿ 10 ಲಕ್ಷ ರೂ. ನಗದು ಕೂಡ ಪತ್ತೆಯಾಗಿದೆ.

2019ರಲ್ಲಿ ಅಸ್ಸಾಂ ನಾಗರಿಕ ಸೇವೆಗೆ ಸೇರಿದ ಗೋಲಾಘಾಟ್ ನಿವಾಸಿ ನೂಪುರ್ ಬೋರಾ ಅವರು ಕಮ್ರೂಪ್ ಜಿಲ್ಲೆಯ ಗೊರೊಯಿಮರಿಯಲ್ಲಿ ವೃತ್ತ ಅಧಿಕಾರಿಯಾಗಿ ಕರ್ತವ್ಯದಲ್ಲಿದ್ದಾರೆ.

"ಭೂ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಬಳಿಕ ಕಳೆದ ಆರು ತಿಂಗಳಿನಿಂದ ಅವರ ಚಲನವಲನಗಳ ಮೇಲೆ ನಿಗಾ ಇಡಲಾಗಿತ್ತು" ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಬಾರ್ಪೇಟಾದ ಕಂದಾಯ ಅಧಿಕಾರಿಯ ಕಚೇರಿಯಲ್ಲಿ ಕೆಲಸ ಮಾಡುವ ಅವರ ಸಹಾಯಕ ಲತ್ ಮಂಡಲ್ ಸೂರಜಿತ್ ದೇಕಾ ಅವರ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News