×
Ad

ಸಹಾರಾ ಸಮೂಹದ ಸಂಸ್ಥಾಪಕ ಸುಬ್ರತಾ ರಾಯ್ ನಿಧನ

Update: 2023-11-14 23:46 IST
PHOTO : PTI

ಮುಂಬೈ : ಸಹಾರಾ ಸಮೂಹದ ಸಂಸ್ಥಾಪಕ ಸುಬ್ರತಾ ರಾಯ್ ಅವರು ಅನಾರೋಗ್ಯದಿಂದ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಜೂನ್ 10, 1948 ರಂದು ಬಿಹಾರದ ಅರಾರಿಯಾದಲ್ಲಿ ಜನಿಸಿದ ರಾಯ್ ಅವರು ಭಾರತೀಯ ವ್ಯಾಪಾರ ಕ್ಷೇತ್ರದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು. ಹಣಕಾಸು, ರಿಯಲ್ ಎಸ್ಟೇಟ್, ಮಾಧ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹರಾ ವ್ಯಾಪಿಸಿತ್ತು. ವ್ಯಾಪಾರ ಯಶಸ್ಸಿನ ಹೊರತಾಗಿಯೂ, ರಾಯ್ ಕಾನೂನು ಸವಾಲುಗಳನ್ನು ಎದುರಿಸಿದ್ದರು. 2014 ರಲ್ಲಿ, ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್‌ ಬೋರ್ಡ್‌ ಆಫ್ ಇಂಡಿಯಾ (SEBI) ದೊಂದಿಗಿನ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದ ಕಾರಣಕ್ಕಾಗಿ ಭಾರತದ ಸರ್ವೋಚ್ಚ ನ್ಯಾಯಾಲಯವು ಅವರನ್ನು ಬಂಧನಕ್ಕೆ ಆದೇಶಿಸಿತು. ಇದು ಸುದೀರ್ಘವಾದ ಕಾನೂನು ಹೋರಾಟಕ್ಕೆ ಕಾರಣವಾಯಿತು, ರಾಯ್ ತಿಹಾರ್ ಜೈಲಿನಲ್ಲಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News