ದಿಲ್ಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್
Update: 2025-10-27 12:35 IST
ಉಮರ್ ಖಾಲಿದ್ , ಶರ್ಜೀಲ್ ಇಮಾಮ್ | Photo Credit : PTI
ಹೊಸದಿಲ್ಲಿ : 2020ರ ದಿಲ್ಲಿ ಗಲಭೆಗೆ ಸಂಬಂಧಿಸಿದ ಪಿತೂರಿ ಪ್ರಕರಣದಲ್ಲಿ ಬಂಧಿತ ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಮತ್ತು ಇತರರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 31ಕ್ಕೆ ಮುಂದೂಡಿದೆ.
ದಿಲ್ಲಿ ಪೊಲೀಸರ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು ಪ್ರತಿ ಅಫಿಡವಿಟ್ ಸಲ್ಲಿಸಲು ಹೆಚ್ಚುವರಿ ಸಮಯವನ್ನು ಕೋರಿದ ನಂತರ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 31ಕ್ಕೆ ಮುಂದೂಡಿದೆ.
ದಿಲ್ಲಿ ಗಲಭೆಗೆ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಗುಲ್ಫಿಶಾ ಫಾತಿಮಾ, ಶರ್ಜೀಲ್ ಇಮಾಮ್, ಮೀರನ್ ಹೈದರ್, ಉಮರ್ ಖಾಲಿದ್, ಶಿಫಾ ಉರ್ ರಹ್ಮಾನ್ ಹಾಗೂ ಮುಹಮ್ಮದ್ ಸಲೀಮ್ ಖಾನ್ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿದ್ದರು.