ಉಮರ್ ಖಾಲಿದ್, ಶರ್ಜೀಲ್ ಇಮಾಮ್ | Photo Credit :PTI

ಹೊಸದಿಲ್ಲಿ: 2020ರ ದಿಲ್ಲಿ ಗಲಭೆಗೆ ಸಂಬಂಧಿಸಿದ ಪಿತೂರಿ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರರಾದ ಶರ್ಜೀಲ್ ಇಮಾಮ್ ಮತ್ತು ಉಮರ್ ಖಾಲಿದ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.

ಅವರ ಅರ್ಜಿಗಳನ್ನು ಪರಿಗಣಿಸುವ ಮೊದಲು ದಿಲ್ಲಿ ಪೊಲೀಸರ ವಾದವನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (JNU) ಮಾಜಿ ವಿದ್ಯಾರ್ಥಿಗಳಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ದಿಲ್ಲಿ ಗಲಭೆಗೆ ಸಂಬಂಧಿಸಿದ ಪಿತೂರಿ ಆರೋಪದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (UAPA) ಅಡಿಯಲ್ಲಿ ಪ್ರಸ್ತುತ ಜೈಲಿನಲ್ಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಿದ್ದಿಕ್‌ ನೆಲ್ಲಿಗುಡ್ಡೆ, ವಾರ್ತಾಭಾರತಿ

contributor