ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ (Photo: PTI)

ಹೊಸದಿಲ್ಲಿ: ಶ್ವಾಸಕೋಶದ ಸಮಸ್ಯೆಗೆ ತುತ್ತಾಗಿರುವ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ (98) ಅವರನ್ನು ಶುಕ್ರವಾರ ಸಂಜೆ ದಿಲ್ಲಿಯಲ್ಲಿನ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಜಸೋಲಾ ವಿಹಾರ್ ನಲ್ಲಿರುವ ಆಸ್ಪತ್ರೆಗೆ ಎಲ್.ಕೆ.ಅಡ್ವಾಣಿ ಅವರನ್ನು ಸಂಜೆ ಸುಮಾರು 7.30ರ ವೇಳೆಗೆ ಕರೆದೊಯ್ಯಲಾಯಿತು.

ಅಡ್ವಾಣಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಶೀಘ್ರವೇ ಪ್ರಕಟಣೆ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಲ್.ಕೆ.ಅಡ್ವಾಣಿ, 2002ರಿಂದ 2004ರವರೆಗೆ ಉಪ ಪ್ರಧಾನಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಬಿಜೆಪಿಯ ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಯುವಲ್ಲಿ ಎಲ್.ಕೆ.ಅಡ್ವಾಣಿ ಮಹತ್ತರ ಪಾತ್ರ ನಿರ್ವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor