×
Ad

"ಗಂಭೀರ ಪ್ರಶ್ನೆಗಳಾಗಿವೆ": ʼಮತಗಳ ಕಳ್ಳತನʼ ಆರೋಪಿಸಿದ ರಾಹುಲ್ ಗಾಂಧಿಗೆ ಶಶಿ ತರೂರ್ ಬೆಂಬಲ

Update: 2025-08-08 10:41 IST

Photo | PTI

ಹೊಸದಿಲ್ಲಿ : 2024ರ ಲೋಕಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂಬ ರಾಹುಲ್ ಗಾಂಧಿಯವರ ಸ್ಫೋಟಕ ಆರೋಪವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಬೆಂಬಲಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಜೊತೆ ಇತ್ತೀಚೆಗೆ ಭಿನ್ನಾಭಿಪ್ರಾಯಕ್ಕಾಗಿ ಸುದ್ದಿಯಾಗಿದ್ದ ಸಂಸದ ಶಶಿ ತರೂರ್, ʼಇವು ಎಲ್ಲಾ ಪಕ್ಷಗಳು ಮತ್ತು ಎಲ್ಲಾ ಮತದಾರರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಗಂಭೀರವಾಗಿ ಪರಿಹರಿಸಬೇಕಾದ ಗಂಭೀರ ಪ್ರಶ್ನೆಗಳಾಗಿವೆ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಬಹಳ ಅಮೂಲ್ಯವಾದುದು. ಅದನ್ನು ಅದಕ್ಷತೆ, ಅಜಾಗರೂಕತೆ ಅಥವಾ ಇನ್ನೂ ಕೆಟ್ಟದಾಗಿ ಉದ್ದೇಶಪೂರ್ವಕವಾಗಿ ಅಕ್ರಮಕ್ಕೆ ಬಿಡಲಾಗದು. ಚುನಾವಣಾ ಆಯೋಗ ಈ ಬಗ್ಗೆ ತುರ್ತಾಗಿ ಪ್ರತಿಕ್ರಿಯಿಸಿ ವಾಸ್ತವವನ್ನು ಜನರ ಮುಂದಿಡಬೇಕುʼ ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶಂಸಿಸುವುದು ಮತ್ತು ತುರ್ತು ಪರಿಸ್ಥಿತಿಯ ಬಗ್ಗೆ ವಿಮರ್ಶಾತ್ಮಕ ಹೇಳಿಕೆಗಳನ್ನು ಒಳಗೊಂಡಂತೆ ಕಳೆದ ಆರು ತಿಂಗಳಿನಿಂದ ಬಹಿರಂಗವಾಗಿ ಮಾತನಾಡುತ್ತಾ ಬಂದಿರುವ ತರೂರ್ ಅವರ ಹೇಳಿಕೆಗಳು ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು.

2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಪ್ರಮಾಣದಲ್ಲಿ ಮತಗಳ್ಳತನ ನಡೆದಿದ್ದು, 6.5 ಲಕ್ಷ ಮತಗಳ ಪೈಕಿ 1 ಲಕ್ಷಕ್ಕೂ ಅಧಿಕ ಮತಗಳ್ಳತನ ನಡೆದಿದೆಯೆಂದು ಅವರು ಆಪಾದಿಸಿದ್ದಾರೆ.

ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ನಕಲಿ ಮತದಾರರು, ಅಮಾನ್ಯವಾದ ವಿಳಾಸಗಳು ಹಾಗೂ ಮತದಾರರ ಸೇರ್ಪಡೆಯನ್ನು ಕಾಂಗ್ರೆಸ್ ಪಕ್ಷದ ಆಂತರಿಕ ಅಧ್ಯಯನವು ಪತ್ತೆಹಚ್ಚಿದೆಯೆಂದು ಅವರು ಹೇಳಿದ್ದರು. ಈ ಕುರಿತ ದಾಖಲೆಗಳನ್ನು ಅವರು ಪತ್ರಿಕಾಗೋಷ್ಟಿಯಲ್ಲಿ ಬಿಡುಗಡೆ ಮಾಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News