ತೆಲಂಗಾಣ | ನಿರ್ಮಾಣ ಹಂತದ ಸುರಂಗ ಕುಸಿತ: ಅವಶೇಷಗಳಡಿ 6 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ
Update: 2025-02-22 15:16 IST
Photo credit : NDTV
ಹೈದರಾಬಾದ್: ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸುರಂಗದ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿಯಲ್ಲಿ ಕನಿಷ್ಠ ಆರು ಮಂದಿ ಕಾರ್ಮಿಕರು ಸಿಲುಕಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಶ್ರೀಶೈಲಂ ಅಣೆಕಟ್ಟಿನ ಹಿಂಭಾಗದ ಸುರಂಗದ ಒಳಗೆ ಸೋರಿಕೆಯನ್ನು ಸರಿಪಡಿಸಲು ಕಾರ್ಮಿಕರು ತೆರಳಿದ್ದಾಗ, ಸುರಂಗದ ಒಂದು ಭಾಗ ಕುಸಿದಿದೆ. ಈ ವೇಳೆ ಮೂವರು ಕಾರ್ಮಿಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕನಿಷ್ಠ ಆರು ಮಂದಿ ಸುರಂಗದ ಒಳಗೆ ಸಿಲುಕಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.
ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಇತರ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದ್ದಾರೆ.