Photo: screengrab/x.com/PTI_News

ಹೊಸದಿಲ್ಲಿ: ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಲ್ಕು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿರುವ 'ಇಂಡಿಯಾ' ಮೈತ್ರಿಕೂಟದ ನಾಯಕರು ಸೋಮವಾರ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಮೈತ್ರಿಕೂಟವು ನಾಲ್ಕು ಪ್ರಮುಖ ಬೇಡಿಕೆಗಳನ್ನು ಪ್ರಸ್ತಾಪಿಸಿದೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿರುವ ಮೈತ್ರಿಕೂಟ, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರಿಗೆ ಜೀವಮಾನವಿಡೀ ವಿನಾಯಿತಿ ನೀಡುವ 2023ರ ಕಾನೂನನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಹಾಗೂ ಮತದಾರರ ಪಟ್ಟಿಯಿಂದ ಅಳಿಸಲಾಗಿರುವ 13.3 ಕೋಟಿ ಮತದಾರರ ಹೆಸರುಗಳನ್ನು ಮರುಸ್ಥಾಪಿಸಬೇಕು ಎಂಬುದು ಮತ್ತೊಂದು ಬೇಡಿಕೆಯಾಗಿದೆ.

ಎಲ್ಲ ಚುನಾವಣೆಗಳಲ್ಲೂ ಕಾಗದದ ಮತಪತ್ರಗಳ ಬಳಕೆಯನ್ನು ಪುನರಾರಂಭಿಸಬೇಕು ಎಂದು ಮೈತ್ರಿಕೂಟ ಆಗ್ರಹಿಸಿದೆ.

ಕಳೆದ ಎರಡು ವರ್ಷಗಳಲ್ಲಿ ನಡೆದ ಎಲ್ಲ ವಿಧಾನಸಭಾ ಚುನಾವಣೆಗಳನ್ನು ರದ್ದುಗೊಳಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದೆ. ಈ ಚುನಾವಣೆಗಳಲ್ಲಿ ಮತಚೋರಿ ನಡೆದಿರುವುದಕ್ಕೆ ನಿರ್ಣಾಯಕ ಪುರಾವೆಗಳನ್ನು ಮಂಡಿಸಿರುವುದಾಗಿ ಇಂಡಿಯಾ ಮೈತ್ರಿಕೂಟ ಹೇಳಿಕೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor