SIR ಕಾನೂನುಬದ್ಧವಾಗಿ ಮಾನ್ಯ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಎತ್ತಿಹಿಡಿದ ನ್ಯಾಯಾಲಯ
ಸುಪ್ರೀಂ ಕೋರ್ಟ್ | Photo Credit : sci.gov.in
ಹೊಸದಿಲ್ಲಿ: ಭಾರತದ ಚುನಾವಣಾ ಆಯೋಗ ನಡೆಸುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಕಾನೂನುಬದ್ಧತೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ಸಂವಿಧಾನದ 324ನೇ ವಿಧಿಯ ಅಡಿಯಲ್ಲಿ ಚುನಾವಣಾ ಆಯೋಗವು SIR ನಡೆಸುವ ಅಧಿಕಾರವನ್ನು ಹೊಂದಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಜನಪ್ರತಿನಿಧಿತ್ವ ಕಾಯ್ದೆ-1950 ಹಾಗೂ ಅದರಡಿ ರೂಪಿಸಲಾದ ನಿಯಮಾವಳಿಗಳ ಪ್ರಕಾರ ಈ ಅಧಿಕಾರವಿದೆ ಎಂದು ನ್ಯಾಯಾಲಯ ಹೇಳಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಈ ತೀರ್ಪು ನೀಡಿದೆ.
ಕಳೆದ ಜೂನ್‌ನಲ್ಲಿ ಬಿಹಾರದಲ್ಲಿ SIR ನಡೆಸಲು ಚುನಾವಣಾ ಆಯೋಗ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ.
ಎಸ್ಐಆರ್ ಪ್ರಕ್ರಿಯೆಯು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಗುರಿ ಹೊಂದಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.