×
Ad

ರಾಜ್ಯಸಭೆಗೆ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಲಿರುವ ಸೋನಿಯಾ ಗಾಂಧಿ

Update: 2024-02-14 12:05 IST

ಸೋನಿಯಾ ಗಾಂಧಿ (PTI)

ಹೊಸದಿಲ್ಲಿ: ರಾಜ್ಯಸಭಾ ಸ್ಥಾನಕ್ಕೆ ಕಾಂಗ್ರೆಸ್‌ ಪಕ್ಷ ಸೋನಿಯಾ ಗಾಂಧಿ ಅವರನ್ನು ರಾಜಸ್ಥಾನದಿಂದ ಕಣಕ್ಕಿಳಿಸಲು ನಿರ್ಧರಿಸಿದೆ. ಇನ್ನೋರ್ವ ಹಿರಿಯ ಕಾಂಗ್ರೆಸ್‌ ನಾಯಕ ಅಭಿಷೇಕ್‌ ಮನು ಸಿಂಘ್ವಿ ಅವರು ಹಿಮಾಚಲ ಪ್ರದೇಶದಿಂದ ರಾಜ್ಯಸಭಾ ಚುನಾವಣೆಯನ್ನು ಎದುರಿಸಲಿದ್ದಾರೆ.

ನಾಮಪತ್ರ ಸಲ್ಲಿಸಲು ಸೋನಿಯಾ ಗಾಂಧಿ ಇಂದು ಮುಂಜಾನೆ ಜೈಪುರ ತಲುಪಿದ್ದಾರೆ. ಅವರೊಂದಿಗೆ ಪುತ್ರ ರಾಹುಲ್‌ ಗಾಂಧಿ ಹಾಗೂ ಪುತ್ರಿ ಪ್ರಿಯಾಂಕ ಗಾಂಧಿ ವಾದ್ರ ಕೂಡ ಇದ್ದರು. ಮಾಜಿ ಸಿಎಂ ಅಶೋಕ್‌ ಗೆಹ್ಲೋಟ್‌ ಮತ್ತಿತರ ನಾಯಕರು ಅವರನ್ನು ಸ್ವಾಗತಿಸಿದರು.

ಐದು ಅವಧಿಗೆ ಲೋಕಸಭಾ ಸಂಸದೆಯಾಗಿದ್ದ 77 ವರ್ಷದ ಸೋನಿಯಾ ಗಾಂಧಿ ಇದೇ ಮೊದಲ ಬಾರಿಗೆ ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದಾರೆ. ರಾಯ್‌ ಬರೇಲಿ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿರುವ ಸೋನಿಯಾ ಅವರು 1999ರಲ್ಲಿ ಮೊದಲ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News