×
Ad

ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ

Update: 2025-02-15 23:01 IST

ಹೊಸದಿಲ್ಲಿ: ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಶನಿವಾರ ಭಾರಿ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ.

ಪ್ಲಾಟ್‌ಫಾರ್ಮ್ ಸಂಖ್ಯೆ 14 ಮತ್ತು 15 ರಲ್ಲಿ ಕಾಲ್ತುಳಿತ ಸಂಭವಿಸಿದೆ. ಅನೇಕ ಪ್ರಯಾಣಿಕರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.

ಕುಂಭಮೇಳಕ್ಕೆ ತೆರಳಲು ಸಾವಿರಾರು ಸಂಖ್ಯೆಯಲ್ಲಿ ಜನರು ರೈಲು ನಿಲ್ದಾಣಕ್ಕೆ ಆಗಮಿಸಿದ್ದರು. ರೈಲು ಹತ್ತುವ ಸಂದರ್ಭ ಕಾಲ್ತುಳಿತ ಉಂಟಾಗಿದೆ ಎನ್ನಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News