ಜಂತರ್ ಮಂತರ್‌ನಿಂದ ದೂರವಿರಿ: ವಿದ್ಯಾರ್ಥಿಗಳಿಗೆ ಸಲಹಾ ಸೂಚನೆ ಬಿಡುಗಡೆ ಮಾಡಿದ ದಿಲ್ಲಿ ವಿವಿ
ವಿದ್ಯಾರ್ಥಿಗಳನ್ನು ಬೆದರಿಸಲು ನಿಮಗೆಷ್ಟು ಧೈರ್ಯ? : ವಿವಿ ನಡೆಯನ್ನು ಟೀಕಿಸಿದ ರಾಹುಲ್ ಗಾಂಧಿ
Photo | indianexpress
ಹೊಸದಿಲ್ಲಿ: ಜಂತರ್ ಮಂತರ್ ಬಳಿ ಅನಧಿಕೃತ ಗುಂಪುಗೂಡುವಿಕೆ ಹಾಗೂ ಪ್ರತಿಭಟನೆಗಳಿಂದ ದೂರವಿರಿ ಎಂದು ಎಲ್ಲ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗೆ ದಿಲ್ಲಿ ವಿಶ್ವವಿದ್ಯಾಲಯ ಸುರಕ್ಷತಾ ಸಲಹಾ ಸೂಚನೆ ಬಿಡುಗಡೆ ಮಾಡಿದೆ.
ರಾಷ್ಟ್ರ ರಾಜಧಾನಿಯಲ್ಲಿನ ಇತ್ತೀಚಿನ ಘಟನೆಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಹೆಚ್ಚಿರುವ ಕಳವಳ, ಕಾನೂನು ಕ್ರಮಗಳ ಭೀತಿ ಹಾಗೂ ಕ್ಷಿಪ್ರವಾಗಿ ಹರಡುತ್ತಿರುವ ತಪ್ಪು ಮಾಹಿತಿಗಳ ಹಿನ್ನೆಲೆಯಲ್ಲಿ ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಹೇಳಲಾಗಿದೆ.
ಸುಪ್ರೀಂ ಕೋರ್ಟ್ ಮಾರ್ಗಸೂಚಿಯನ್ವಯ ಜಂತರ್ ಮಂತರ್ ಬಳಿ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಲಾಗಿದೆ. ಕಾನೂನುಬಾಹಿರ ಗುಂಪುಗೂಡುವಿಕೆಯಲ್ಲಿ ಪಾಲ್ಗೊಳ್ಳುವುದರಿಂದ ಕಾನೂನು ಜಾರಿ ಪ್ರಾಧಿಕಾರಗಳು ನೇರವಾಗಿ ಕಾನೂನು ಕ್ರಮ ಜರುಗಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.
ವ್ಯಾಪಕ ಪ್ರಮಾಣದಲ್ಲಿ ಕಾನೂನು ಕ್ರಮಗಳಿಗೆ ಒಳಗಾಗುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಕ್ಯಾಂಪಸ್ ನಲ್ಲಿನ ಸ್ಥಾನಮಾನ ಹಾಗೂ ಭವಿಷ್ಯದ ವೃತ್ತಿಪರ ಅವಕಾಶಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ದಿಲ್ಲಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಎಚ್ಚರಿಸಿದೆ.
ವಿದ್ಯಾರ್ಥಿಗಳನ್ನು ಭಾವನಾತ್ಮಕವಾಗಿ ಪ್ರಚೋದಿಸಲು ಹಾಗೂ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಲು ದಾರಿ ತಪ್ಪಿಸುವ ಆನ್‌ಲೈನ್ ತುಣುಕುಗಳು, ಮಾಧ್ಯಮಗಳ ತಿರುಚಿದ ಸುದ್ದಿ ಹರಡಲಾಗುತ್ತಿದೆ ಎಂದೂ ಆಡಳಿತ ಮಂಡಳಿ ಎಚ್ಚರಿಸಿದೆ. ಈ ವೀಡಿಯೊ ತುಣುಕುಗಳಿಗೆ ಪ್ರತಿಕ್ರಿಯಿಸುವುದಕ್ಕೂ ಮುನ್ನ ಅಥವಾ ಹಂಚಿಕೊಳ್ಳುವುದಕ್ಕೂ ಮುನ್ನ ಅಪಾರ ಎಚ್ಚರಿಕೆ ವಹಿಸಿ ಎಂದೂ ಸಲಹೆ ನೀಡಿದೆ.
ವಿದ್ಯಾರ್ಥಿಗಳನ್ನು ಬೆದರಿಸಲು ನಿಮಗೆಷ್ಟು ಧೈರ್ಯ? : ದಿಲ್ಲಿ ವಿವಿ ನಡೆ ಟೀಕಿಸಿದ ರಾಹುಲ್ ಗಾಂಧಿ
ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳದಂತೆ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗೆ ಸುರಕ್ಷತಾ ಸಲಹಾ ಸೂಚನೆ ನೀಡಿರುವ ದಿಲ್ಲಿ ವಿಶ್ವವಿದ್ಯಾಲಯದ (DU) ಕ್ರಮವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಟೀಕಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ‘ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸುತ್ತಿರುವ ವಿದ್ಯಾರ್ಥಿಗಳನ್ನು ಬೆದರಿಸಲು ನಿಮಗೆಷ್ಟು ಧೈರ್ಯ? ಸಮಯ ಬಂದಾಗ ನಿಮ್ಮನ್ನು ಉತ್ತರದಾಯಿಯನ್ನಾಗಿಸಲಾಗುತ್ತದೆ ಎಂಬುದನ್ನು ನೆನಪಿಡಿ’ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದಕ್ಕೂ ಮುನ್ನ ಜಂತರ್ ಮಂತರ್ ಬಳಿ ಅನಧಿಕೃತ ಗುಂಪುಗೂಡುವಿಕೆ ಹಾಗೂ ಪ್ರತಿಭಟನೆಗಳಿಂದ ದೂರವಿರುವಂತೆ ತನ್ನ ಎಲ್ಲ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿಗೆ ದಿಲ್ಲಿ ವಿಶ್ವವಿದ್ಯಾಲಯ ಸುರಕ್ಷತಾ ಸಲಹಾ ಸೂಚನೆ ಬಿಡುಗಡೆ ಮಾಡಿತ್ತು.
ರಾಷ್ಟ್ರ ರಾಜಧಾನಿಯಲ್ಲಿನ ಇತ್ತೀಚಿನ ಘಟನೆಗಳು, ವಿದ್ಯಾರ್ಥಿಗಳ ಸುರಕ್ಷತೆಯ ಕುರಿತ ಹೆಚ್ಚುತ್ತಿರುವ ಕಳವಳ, ಕಾನೂನು ಕ್ರಮಗಳ ಸಾಧ್ಯತೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕ್ಷಿಪ್ರವಾಗಿ ಹರಡುತ್ತಿರುವ ತಪ್ಪು ಮಾಹಿತಿಯ ಹಿನ್ನೆಲೆಯಲ್ಲಿ ಈ ಸೂಚನೆ ಹೊರಡಿಸಲಾಗಿದೆ ಎಂದು ವಿಶ್ವವಿದ್ಯಾಲಯ ಹೇಳಿದೆ.
ಸುಪ್ರೀಂ ಕೋರ್ಟ್ ಮಾರ್ಗಸೂಚಿಯನ್ವಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ. ಕಾನೂನುಬಾಹಿರ ಗುಂಪುಗೂಡುವಿಕೆಯಲ್ಲಿ ಭಾಗವಹಿಸುವುದರಿಂದ ಕಾನೂನು ಜಾರಿ ಪ್ರಾಧಿಕಾರಗಳು ನೇರವಾಗಿ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.
ವ್ಯಾಪಕ ಪ್ರಮಾಣದಲ್ಲಿ ಕಾನೂನು ಕ್ರಮಗಳಿಗೆ ಒಳಗಾಗುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಕ್ಯಾಂಪಸ್‌ನಲ್ಲಿನ ಸ್ಥಾನಮಾನ ಹಾಗೂ ಭವಿಷ್ಯದ ವೃತ್ತಿಪರ ಅವಕಾಶಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ವಿದ್ಯಾರ್ಥಿಗಳನ್ನು ಭಾವನಾತ್ಮಕವಾಗಿ ಪ್ರಚೋದಿಸಲು ಹಾಗೂ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಲು ದಾರಿ ತಪ್ಪಿಸುವ ಆನ್‌ಲೈನ್ ವೀಡಿಯೊ ತುಣುಕುಗಳು ಮತ್ತು ತಿರುಚಿದ ಸುದ್ದಿಗಳು ಹರಡಲಾಗುತ್ತಿವೆ. ಇಂತಹ ವಿಷಯಗಳಿಗೆ ಪ್ರತಿಕ್ರಿಯಿಸುವುದಕ್ಕೂ ಅಥವಾ ಹಂಚಿಕೊಳ್ಳುವುದಕ್ಕೂ ಮುನ್ನ ಅತ್ಯಂತ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.
ದಿಲ್ಲಿ ವಿಶ್ವವಿದ್ಯಾಲಯದ ಈ ಕ್ರಮವು ವ್ಯಾಪಕ ಟೀಕೆಗೆ ಗುರಿಯಾಗಿದ್ದು, ಅದರ ವಿರುದ್ಧ ರಾಹುಲ್ ಗಾಂಧಿ ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.