×
Ad

ಎಸ್‌ಐಆರ್ ಪ್ರಶ್ನಿಸಿ ಅರ್ಜಿ; ನ. 11ರಿಂದ ಸುಪ್ರೀಂನಿಂದ ವಿಚಾರಣೆ

Update: 2025-11-07 20:41 IST

ಸುಪ್ರೀಂ ಕೋರ್ಟ್ | Photo Credit : PTI

ಹೊಸದಿಲ್ಲಿ, ನ. 7: ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಗುಚ್ಛವನ್ನು ನವೆಂಬರ್ 11ರಿಂದ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ.

ಸರಕಾರೇತರ ಸಂಸ್ಥೆ ಅಸೋಸಿಯೇಶನ್ ಪಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ (ಎಡಿಆರ್) ಪರವಾಗಿ ಹಾಜರಾಗಿದ್ದ ನ್ಯಾಯವಾದಿ ಪ್ರಶಾಂತ್ ಭೂಷಣ್, ಈ ವಿಷಯ ತುಂಬಾ ಮುಖ್ಯವಾಗಿದೆ. ಯಾಕೆಂದರೆ, ಇದು ಪ್ರಜಾಪ್ರಭುತ್ವದ ಮೂಲತತ್ವದ ಮೇಲೆ ಪ್ರಭಾವ ಬೀರುತ್ತದೆ ಎಂದು ಪ್ರತಿಪಾದಿಸಿದರು.

ಬಳಿಕ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಜೋಯ್ಮಲ್ಯ ಬಾಗ್ಚಿ ಅವರನ್ನು ಒಳಗೊಂಡ ಪೀಠ, ಮನವಿಗಳ ವಿಚಾರಣೆಯನ್ನು ನವೆಂಬರ್ 11ರಿಂದ ಆರಂಭಿಸಲಾಗುವುದು ಎಂದು ಹೇಳಿತು.

ಹಲವು ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಈಗಾಗಲೇ ಆರಂಭವಾಗಿರುವುದರಿಂದ ಈ ವಿಚಾರಣೆ ತುರ್ತಾಗಿ ನಡೆಯಬೇಕಾಗಿದೆ ಎಂದು ಭೂಷಣ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News