×
Ad

ಜಮ್ಮು-ಕಾಶ್ಮೀರವನ್ನು ಮತ್ತೆ ರಾಜ್ಯವನ್ನಾಗಿ ಮಾಡಲು ಕಾಲಮಿತಿಗೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

Update: 2023-08-29 13:36 IST

ಶ್ರೀನಗರ: ಜಮ್ಮು-ಕಾಶ್ಮೀರವನ್ನು ಮತ್ತೆ ರಾಜ್ಯವನ್ನಾಗಿ ಮಾಡಲು ಕಾಲಮಿತಿಯನ್ನು ರೂಪಿಸುವಂತೆ ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ತಿಳಿಸಿದೆ ಎಂದು NDTV ವರದಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಲು "ಕಾಲಮಿತಿ" ರೂಪಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರಕಾರವನ್ನು ಕೇಳಿದೆ ಹಾಗೂ ಪ್ರಜಾಪ್ರಭುತ್ವದ ಮರುಸ್ಥಾಪನೆಯ ಮಹತ್ವವನ್ನು ಒತ್ತಿಹೇಳಿದೆ.

ನ್ಯಾಯಾಲಯವು ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಆರ್ಟಿಕಲ್ 370 ರ ರದ್ದುಗೊಳಿಸುವಿಕೆಯನ್ನು ಪ್ರಶ್ನಿಸುವ ಹಲವಾರು ಅರ್ಜಿಗಳನ್ನು ಆಲಿಸಿದೆ.

"ನೀವು ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ಪರಿವರ್ತಿಸಬಹುದೇ? ರಾಜ್ಯದಿಂದ ಕೇಂದ್ರಾಡಳಿತವನ್ನು ರೂಪಿಸಬಹುದೇ?" ಎಂದು ನ್ಯಾಯಾಲಯವು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರನ್ನು ಪ್ರಶ್ನಿಸಿದೆ.

ಇದಕ್ಕೆ ಮೆಹ್ತಾ ಅವರು ಸಕಾರಾತ್ಮಕವಾಗಿ ಉತ್ತರಿಸಿದರು. ಅಸ್ಸಾಂ, ತ್ರಿಪುರಾ ಹಾಗೂ ಅರುಣಾಚಲ ಪ್ರದೇಶಗಳನ್ನು ಉದಾಹರಣೆಯಾಗಿ ನೀಡಿದರು.

2019 ರಲ್ಲಿ ಕೇಂದ್ರ ಸರಕಾರವು ಮಹತ್ವದ ನಿರ್ದಾರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿತು ಹಾಗೂ ಜಮ್ಮು ಮತ್ತು ಕಾಶ್ಮೀರವನ್ನುಜಮ್ಮು-ಕಾಶ್ಮೀರ ಹಾಗೂ ಲಡಾಖ್ ಎಂದು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು. "ಒಮ್ಮೆ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದರೆ" ರಾಜ್ಯ ಸ್ಥಾನಮಾನ ಪುನಃಸ್ಥಾಪಿಸಲಾಗುವುದು ಎಂದು ಸರಕಾರವು ತನ್ನ ಟೀಕಾಕಾರರಿಗೆ ಭರವಸೆ ನೀಡಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News