×
Ad

ಹಣ ಅಕ್ರಮ ವರ್ಗಾವಣೆ ಪ್ರಕರಣ: ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನನ್ನು 5 ವಾರಗಳ ಕಾಲ ವಿಸ್ತರಿಸಿದ ಸುಪ್ರೀಂ ಕೋರ್ಟ್

Update: 2023-07-24 22:19 IST

Photo: ಸುಪ್ರೀಂ ಕೋರ್ಟ್ | PTI 

ಹೊಸದಿಲ್ಲಿ: ಜಾರಿ ನಿರ್ದೇಶನಾಲಯ (E.D)ತನಿಖೆ ನಡೆಸುತ್ತಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದಿಲ್ಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ 5 ವಾರಗಳ ಕಾಲ ವಿಸ್ತರಿಸಿದೆ.

ಸತ್ಯೇಂದ್ರ ಜೈನ್ ಅವರು ಜುಲೈ 21ರಂದು ಬೆನ್ನು ಹುರಿಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಚೇತರಿಸಿಕೊಳ್ಳಲು ಕಾಲಾವಕಾಶದ ಅಗತ್ಯತೆ ಇದೆ ಎಂದು ಜೈನ್ ಪರ ಹಾಜರಾಗಿದ್ದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ನ್ಯಾಯೂರ್ತಿಗಳಾದ ಎ.ಎಸ್.ಬೋಪಣ್ಣ ಹಾಗೂ ಬೇಳಾ ಎಂ. ತ್ರಿವೇದಿ ಅವರನ್ನು ಒಳಗೊಂಡ ಪೀಠಕ್ಕೆ ಮಾಹಿತಿ ನೀಡಿದರು.

ಜಾರಿ ನಿರ್ದೇಶನಾಲಯದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು, ಮಧ್ಯಂತರ ಜಾಮೀನಿನ ವಿಸ್ತರಣೆಗೆ ತಾನು ವಿರೋಧ ವ್ಯಕ್ತಪಡಿಸುವುದಿಲ್ಲ ಎಂದರು.

ಏಮ್ಸ್ ಅಥವಾ ಇತರ ಯಾವುದೇ ಆಸ್ಪತ್ರೆಯಿಂದ ಸ್ವತಂತ್ರ್ಯ ಮೌಲ್ಯಮಾಪನ ಕೋರಿದ ತನ್ನ ಅರ್ಜಿಯನ್ನು ಮುಂದಿನ ದಿನಾಂಕದಂದು ವಿಚಾರಣೆ ನಡೆಸಬೇಕೆಂದು ಜಾರಿ ನಿರ್ದೇಶನಾಲಯ ಬಯಸುತ್ತದೆ ಎಂದು ಅವರು ಹೇಳಿದರು.

ಪೀಠ ಪ್ರಕರಣ ವಿಚಾರಣೆಯನ್ನು ಐದು ವಾರಗಳ ಕಾಲ ಮುಂದೂಡಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News