CJP ಚಟುವಟಿಕೆಗಳ ಕುರಿತು CBI ತನಿಖೆ ಕೋರಿ ಅರ್ಜಿ : ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

Update: 2026-08-11 21:30 IST

ಸುಪ್ರೀಂ ಕೋರ್ಟ್ | Photo Credit : sci.gov.in

ಹೊಸದಿಲ್ಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯ ಚಟುವಟಿಕೆ, ನ್ಯಾಯಾಲಯದ ಕಲಾಪಗಳ ಸಂದರ್ಭ ನೀಡಿದ ಮೌಖಿಕ ಹೇಳಿಕೆಗಳ ದುರ್ಬಳಕೆ ಮತ್ತು ಹಣ ಗಳಿಕೆ ಕುರಿತು ಸಿಬಿಐ ತನಿಖೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರಕಾರದ ಪ್ರತಿಕ್ರಿಯೆ ಕೋರಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ವಿ. ಮೋಹನಾ ಮತ್ತು ಜಾಮ್‌ಮಾಲ್ಯ ಬಾಗ್ಚಿ ಅವರಿದ್ದ ಪೀಠ ಸುಪ್ರೀಂ ಕೋರ್ಟ್ ವಕೀಲ ರಾಜಾ ಚೌಧರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಅವರು ಮೇ 15ರಂದು ನ್ಯಾಯಾಲಯದ ವಿಚಾರಣೆ ವೇಳೆ ಕಾಕ್ರೋಚ್ ಎಂಬ ಪದ ಬಳಸಿದ್ದರು. ದೇಶದ ನಿರುದ್ಯೋಗಿ ಯುವಕರು, ನಕಲಿ ಕಾನೂನು ಪದವೀಧರರು ಮತ್ತು ಆರ್‌ಟಿಐ ಕಾರ್ಯಕರ್ತರ ಬಗ್ಗೆ ಕಳವಳ ವ್ಯಕ್ತಪಡಿಸುವಾಗ ಅವರು ಈ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಈ ಅರ್ಜಿ ಸಲ್ಲಿಕೆಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News