×
Ad

ಪಶ್ಚಿಮ ಬಂಗಾಳ | 25,000 ಶಿಕ್ಷಕರನ್ನು ವಜಾ ಮಾಡಿದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

Update: 2025-04-03 11:47 IST

NDTV

ಹೊಸದಿಲ್ಲಿ : ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,000 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಯನ್ನು ರದ್ದುಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇದರಿಂದ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರಕಾರಕ್ಕೆ ಹಿನ್ನಡೆಯಾಗಿದೆ.

ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,753 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಕ ಮಾಡಿದ್ದ ಶಾಲಾ ಸೇವಾ ಆಯೋಗದ(ಎಸ್ಎಸ್‌ಸಿ) ಪ್ರಕ್ರಿಯೆಯನ್ನು ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿತ್ತು. ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ ಅವರ ಪೀಠ, ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದ ಅಡಿಯಲ್ಲಿ ನೇಮಕಗೊಂಡ 25,000ಕ್ಕೂ ಅಧಿಕ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಯನ್ನು ರದ್ದುಗೊಳಿಸಿದೆ. ಸಂಪೂರ್ಣ ಆಯ್ಕೆ ಪ್ರಕ್ರಿಯೆಯು ವಂಚನೆಯಿಂದ ಕೂಡಿದೆ ಎಂದು ಹೇಳಿದೆ.

ಹೈಕೋರ್ಟ್ ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಸೂಕ್ತ ಕಾರಣ ನಮಗೆ ಕಂಡು ಬಂದಿಲ್ಲ ಎಂದು ಸುಪ್ರೀಂ ಕೋರ್ಟ್ ಪೀಠವು ಹೇಳಿದ್ದು, ಮೂರು ತಿಂಗಳೊಳಗೆ ಹೊಸ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News