"ಮುಹೂರ್ತಕ್ಕಾಗಿ ಕಾಯುತ್ತಿದ್ದೀರಾ?": ಬಂಧನ ಕೇಂದ್ರಗಳಲ್ಲಿರುವ 63 ಮಂದಿಯನ್ನು ಗಡೀಪಾರು ಮಾಡಲು ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
Update: 2025-02-04 12:22 IST
ಹೊಸದಿಲ್ಲಿ: ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಪ್ರಕ್ರಿಯೆಯಲ್ಲಿ ವಿದೇಶಿಯರೆಂದು ಘೋಷಿಸಲ್ಪಟ್ಟ ನಂತರ ಬಂಧನ ಕೇಂದ್ರಗಳಲ್ಲಿರುವ 63 ಜನರನ್ನು ಗಡೀಪಾರು ಮಾಡುವಂತೆ ಸುಪ್ರೀಂ ಕೋರ್ಟ್ ಅಸ್ಸಾಂ ಸರ್ಕಾರಕ್ಕೆ ಸೂಚನೆ ನೀಡಿದೆ.
ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರಿದ್ದ ಪೀಠವು, ವಿದೇಶಿಯರು ಎಂದು ಘೋಷಿಸಲಾದ ಜನರನ್ನು ಗಡೀಪಾರು ಮಾಡದಿದ್ದಕ್ಕಾಗಿ ಅಸ್ಸಾಂ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಮುಹೂರ್ತಕ್ಕಾಗಿ ಕಾಯುತ್ತಿದ್ದೀರಾ ಎಂದು ಅಸ್ಸಾಂ ಸರ್ಕಾರವನ್ನು ಪ್ರಶ್ನಿಸಿತು.
ವಾರ್ತಾ ಭಾರತಿಯ ವಾಟ್ಸ್ ಆ್ಯಪ್ ಚಾನಲ್ ಗೆ ಸೇರಲು ಕ್ಲಿಕ್ ಮಾಡಿ ► https://whatsapp.com/channel/0029VaA8ju86LwHn9OQpEq28