×
Ad

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ

Update: 2025-01-20 12:50 IST

ರಾಹುಲ್ ಗಾಂಧಿ (PTI)

ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ʼಕೊಲೆ ಆರೋಪಿʼ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಜಾರ್ಖಂಡ್ ನ್ಯಾಯಾಲಯದಲ್ಲಿ ಬಾಕಿ ಇರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.

ಪ್ರಕರಣವನ್ನು ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಜಾರ್ಖಂಡ್ ಸರ್ಕಾರ ಮತ್ತು ದೂರುದಾರ ಬಿಜೆಪಿ ನಾಯಕ ನವೀನ್ ಝಾ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ಸೂಚನೆ ಬರುವವರೆಗೆ ವಿಚಾರಣಾ ಪ್ರಕ್ರಿಯೆಗಳಿಗೆ ತಡೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ರಾಹುಲ್‌ ಗಾಂಧಿಗೆ ನೀಡಿದ ಸಮನ್ಸ್ ಅನ್ನು ರದ್ದುಗೊಳಿಸಲು ಜಾರ್ಖಂಡ್ ಹೈಕೋರ್ಟ್ 2024ರ ಫೆಬ್ರವರಿಯಲ್ಲಿ ನಿರಾಕರಿಸಿತ್ತು. ಜಾರ್ಖಂಡ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ರಾಹುಲ್ ಗಾಂಧಿಯ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಮಾನನಷ್ಟ ಮೊಕದ್ದಮೆಯನ್ನು ಮೂರನೇ ವ್ಯಕ್ತಿ ಸಲ್ಲಿಸಿದ್ದಾರೆ, ಇದು ಕಾನೂನಿನಡಿಯಲ್ಲಿ ಅನುಮತಿಸಲಾಗುವುದಿಲ್ಲ ಎಂದು ವಾದಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News