ವಕ್ಫ್ ತಿದ್ದುಪಡಿ ಕಾನೂನಿಗೆ ತಡೆ ಕೋರಿ ಅರ್ಜಿ; ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್
Update: 2025-05-22 17:53 IST
Photo | NDTV
ಹೊಸದಿಲ್ಲಿ: ವಕ್ಫ್ ತಿದ್ದುಪಡಿ ಕಾನೂನಿಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರಿದ್ದ ಪೀಠವು ಮೂರು ದಿನಗಳ ಕಾಲ ವಕ್ಫ್ ತಿದ್ದುಪಡಿ ಕಾನೂನಿಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಬಳಿಕ ಈ ನಿರ್ಧಾರಕ್ಕೆ ಬಂದಿದೆ.