Ayodhya Ram Mandir ದೇಣಿಗೆ ದುರುಪಯೋಗ ಆರೋಪ: ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿಗಳ ವಿಚಾರಣೆ ಇಂದು

Update: 2026-08-10 10:41 IST

  ರಾಮಮಂದಿರ ,  ಸುಪ್ರೀಂ ಕೋರ್ಟ್ | Photo Credit : PTI 

ಹೊಸದಿಲ್ಲಿ, ಆ. 10: ಅಯೋಧ್ಯೆಯ ರಾಮಮಂದಿರಕ್ಕೆ ಬಂದಿರುವ ದೇಣಿಗೆಗಳ ದುರುಪಯೋಗವಾಗಿದೆ ಎಂಬ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನ ಅವರನ್ನೊಳಗೊಂಡ ಪೀಠ ಅರ್ಜಿಗಳ ವಿಚಾರಣೆ ನಡೆಸಲಿದೆ.

ದೇಣಿಗೆಗಳ ದುರುಪಯೋಗದ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಈ ತಂಡದ ತನಿಖೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿಧಿವಿಜ್ಞಾನ ಲೆಕ್ಕಪರಿಶೋಧಕರನ್ನು ತಂಡದಲ್ಲಿ ಸೇರಿಸಿಕೊಳ್ಳುವಂತೆ ಈ ಹಿಂದೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರಕಾರಕ್ಕೆ ಸೂಚಿಸಿತ್ತು.

ಈ ಹಿನ್ನೆಲೆಯಲ್ಲಿ, ಸಿಬಿಐನಿಂದ ತನಿಖೆ ನಡೆಸಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News