ಪಶ‍್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ   (Photo: PTI)

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯಲ್ಲಿ 27 ಲಕ್ಷ ಮತದಾರರ ಹೆಸರು ಅಳಿಸಿ ಹೋಗಲು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾರಣವೇ ಹೊರತು, ಬಿಜೆಪಿಯಾಗಲಿ ಅಥವಾ ಚುನಾವಣಾ ಆಯೋಗವಾಗಲಿ ಕಾರಣವಲ್ಲ ಎಂದು ಪಶ‍್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಹೇಳಿದ್ದಾರೆ. ಆದರೆ, ಈ ಕುರಿತು ಅವರು ಯಾವುದೇ ವಿವರಣೆ ನೀಡಿಲ್ಲ.

ರಾ‍ಜ್ಯ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರಿಂದ ಹತಾಶವಾಗಿರುವ ವಿರೋಧ ಪಕ್ಷಗಳು, ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ (SIR) ಕುರಿತು ಸುಳ್ಳು ಸುದ್ದಿಗಳನ್ನು ಹರಡುತ್ತಿವೆ ಹಾಗೂ ಮತಪಟ್ಟಿ ಪರಿಷ್ಕರಣೆಗೆ ಅವುಗಳ ವಿರೋಧವು ರಾಜಕೀಯ ಪ್ರೇರಿತವಾಗಿವೆ ಎಂದು ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿನ ಬಿಜೆಪಿಯ ಗೆಲುವನ್ನು ಅರಗಿಸಿಕೊಳ್ಳಲು ಕೆಲವು ಸುದ್ದಿ ವಾಹಿನಿಗಳಿಗೆ ಸಾಧ‍್ಯವಾಗುತ್ತಿಲ್ಲ ಹಾಗೂ ಅವು ಸುಳ್ಳು ಸುದ್ದಿಗಳನ್ನು ಹರಡುತ್ತಿವೆ ಎಂದೂ ಅವರು ದೂರಿದ್ದಾರೆ.

ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯನ್ನು ಟೀಕಿಸುತ್ತಿರುವ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಸುವೇಂದು ಅಧಿಕಾರಿ, ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯನ್ನು ಪಾರದರ್ಶಕ ಹಾಗೂ ಸೂಕ್ತ ಭಾಗವಹಿಸುವಿಕೆಯ ಮೂಲಕ ನಡೆಸಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ವಿರುದ್ಧವೂ ವಾಗ್ದಾಳಿ ನಡೆಸಿದ ಸುವೇಂದು ಅಧಿಕಾರಿ, “ಕೇರಳದಲ್ಲಿ ತಮ್ಮ ಪಕ್ಷ ಗೆಲುವು ಸಾಧಿಸಿರುವುದರಿಂದ, ಅಲ್ಲಿ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯನ್ನು ಕಾಂಗ್ರೆಸ್ ಸಮರ್ಥಿಸುತ್ತಿದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಪರಾಭವಗೊಂಡಿರುವುದರಿಂದ, ಇಲ್ಲಿ ಅದನ್ನು ವಿರೋಧಿಸುತ್ತಿದೆ” ಎಂದೂ ದೂರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor