×
Ad

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ತಮಿಳುನಾಡು ಸಚಿವನಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್

Update: 2023-12-21 11:36 IST

Photo: PTI

ಚೆನ್ನೈ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಸಚಿವ ಕೆ ಪೊಣ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ತನಗೆ ವಿಧಿಸಿರುವ ಶಿಕ್ಷೆಯ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲ ಅವಕಾಶ ನೀಡಿದ್ದು, ಅಲ್ಲಿಯವರೆಗೆ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲಾಗಿದೆ, ಹಾಗಾಗಿ, ಅವರು ಶರಣಾಗಲು ಇನ್ನೂ ಸಮಯಾವಕಾಶ ಇದೆ.

ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣದಲ್ಲಿ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅಪರಾಧಿ ಎಂದು ಮದ್ರಾಸ್‌ ಹೈಕೋರ್ಟ್‌ ಮಂಗಳವಾರ ಆದೇಶಿಸಿತ್ತು.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪೊನ್ಮುಡಿ ಅವರ ಪತ್ನಿಯನ್ನು ದೋಷಿ ಎಂದು ತೀರ್ಪು ನೀಡಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News