×
Ad

ಶಿಕ್ಷಕರ ನೇಮಕಾತಿ ಹಗರಣ ಅಭಿಷೇಕ್ ಬ್ಯಾನರ್ಜಿ, ಪತ್ನಿ ರುಜಿರಾಗೆ ಇ.ಡಿ. ಸಮನ್ಸ್

Update: 2023-10-04 19:55 IST

Photo: PTI

ಹೊಸದಿಲ್ಲಿ: ಪಶ್ಚಿಮಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಅಕ್ಟೋಬರ್ 9ರಂದು ತನ್ನ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ತೃಣಮೂಲ ಕಾಂಗ್ರೆಸ್ ನ ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.)ಬುಧವಾರ ಸಮನ್ಸ್ ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಅಕ್ಟೋಬರ್ 11ರಂದು ವಿಚಾರಣೆಗೆ ಹಾಜರಾಗುವಂತೆ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜಿರಾ ಅವರಿಗೂ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘‘ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ನಮ್ಮ ಅಧಿಕಾರಿಗಳು ಬ್ಯಾನರ್ಜಿ ಅವರನ್ನು ಅಕ್ಟೋಬರ್ 9ರಂದು ಹಾಗೂ ಅವರ ಪತ್ನಿಯನ್ನು ಅಕ್ಟೋಬರ್ 11ರಂದು ವಿಚಾರಣೆ ನಡೆಸಲಿದ್ದಾರೆ. ಇಲ್ಲಿನ ಸಿಜಿಒ ಸಂಕೀರ್ಣದಲ್ಲಿರುವ ನಮ್ಮ ಕಚೇರಿಗೆ ಬರುವಂತೆ ಇಬ್ಬರಿಗೂ ಸೂಚಿಸಲಾಗಿದೆ’’ ಎಂದು ಅವರು ತಿಳಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿ ತನ್ನ ಅಧಿಕಾರಿಗಳ ಮುಂದೆ ಹಾಜರಾಗುವಂತೆ ಅಭಿಷೇಕ್ ಬ್ಯಾನರ್ಜಿ ಅವರ ಹೆತ್ತವರಾದ ಅಮಿತ್ ಹಾಗೂ ಲತಾ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ ಈ ಹಿಂದೆ ಸಮನ್ಸ್ ನೀಡಿತ್ತು. ಈ ಹಿಂದೆ ಜಾರಿ ನಿರ್ದೇಶನಾಲಯ ಅಕ್ಟೋಬರ್ 3ರಂದು ಹಾಜರಾಗುವಂತೆ ಅಭಿಷೇಕ್ ಬ್ಯಾನರ್ಜಿ ಅವರಿಗೆ ಸಮನ್ಸ್ ನೀಡಿತ್ತು. ಆದರೆ, ಅವರು ಹಾಜರಾಗಿರಲಿಲ್ಲ. ಬದಲಾಗಿ ಅವರು ರಾಜ್ಯ ಸರಕಾರಕ್ಕೆ ಬಾಕಿ ಇರುವ ಕೇಂದ್ರದ ನಿಧಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬಿಜೆಪಿ ನೇತೃತ್ವದ ಸರಕಾರದ ವಿರುದ್ಧದ ತೃಣಮೂಲ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News