×
Ad

ಹರ್ಯಾಣ | ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್‌ಗೆ ಗುಂಡಿಕ್ಕಿ ಹತ್ಯೆ : ತಂದೆಯಿಂದಲೇ ಕೃತ್ಯ

Update: 2025-07-10 18:48 IST

Photo | NDTV

ಗುರುಗ್ರಾಮ: ರಾಜ್ಯ ಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರನ್ನು ಗುರುಗ್ರಾಮದಲ್ಲಿರುವ ಅವರ ನಿವಾಸದಲ್ಲಿ ಆಕೆಯ ತಂದೆಯೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ರಾಧಿಕಾ ತನ್ನ ಪೋಷಕರೊಂದಿಗೆ ಗುರುಗ್ರಾಮದ ಸೆಕ್ಟರ್ 57ರಲ್ಲಿರುವ ನಿವಾಸದಲ್ಲಿ ವಾಸಿಸುತ್ತಿದ್ದರು. ಗುರುವಾರ ಮಧ್ಯಾಹ್ನ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಕೆಯ ತಂದೆಯೇ ಈ ಕೃತ್ಯವನ್ನು ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಪೊಲೀಸ್ ಅಧಿಕಾರಿಗಳು ಈ ಕುರಿತು ತನಿಖೆ ಆರಂಭಿಸಿದ್ದು, ಸ್ಥಳೀಯರು ಮತ್ತು ಕುಟುಂಬದ ಸದಸ್ಯರಿಂದ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ರಾಧಿಕಾ ಯಾದವ್ ಅವರು ಹರ್ಯಾಣದ ಕ್ರೀಡಾ ವಲಯದಲ್ಲಿ ಭರವಸೆಯ ಟೆನಿಸ್ ಆಟಗಾರ್ತಿಯಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News