ಮಧ್ಯ ಪ್ರದೇಶ | ಇಂದೋರ್‌ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ : ಇಬ್ಬರು ಮೃತ್ಯು; 12 ಮಂದಿಗೆ ಗಾಯ
Update: 2025-09-23 10:45 IST
Photo | ANI
ಇಂದೋರ್: ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟು,12 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ಇಂದೋರ್ ನ ಜವಾಹರ್ ಮಾರ್ಗ್ ನ ಪ್ರೇಮ್ ಸುಖ್ ಟಾಕೀಸ್ ಬಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ರಾತ್ರಿ ಸುಮಾರು 9 ಗಂಟೆಗೆ ದೌಲತ್ ಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ತಳ ಅಂತಸ್ತು ಸೇರಿದಂತೆ ಮೂರು ಅಂತಸ್ತಿನ ಕಟ್ಟಡ ದಿಢೀರನೆ ಕುಸಿದು ಬಿದ್ದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಕಟ್ಟಡದ ಅವಶೇಷಗಳಡಿ 13 ಮಂದಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶಿವಂ ವರ್ಮ, ಓರ್ವ ಮಗು ಸೇರಿದಂತೆ ಒಟ್ಟು 14 ಮಂದಿಯನ್ನು ರಕ್ಷಿಸಲಾಗಿದೆ. ಈ ಪೈಕಿ ಓರ್ವ ಮಹಿಳೆಯ ಕಾಲಿಗೆ ತೀವ್ರ ಸ್ವರೂಪದ ಗಾಯವಾಗಿದೆ ಎಂದು ತಿಳಿಸಿದ್ದಾರೆ.