×
Ad

ಕರೂರ್ ದುರಂತದ ಎರಡು ತಿಂಗಳ ಬಳಿಕ ರಾಜಕೀಯ ಪ್ರಚಾರ ಪುನರಾರಂಭಿಸಿದ ಟಿವಿಕೆ ಮುಖ್ಯಸ್ಥ ವಿಜಯ್

Update: 2025-11-23 10:57 IST

ಚೆನ್ನೈ: ತಮಿಳಗ ವೆಟ್ರಿ ಕಳಗಂ ಸಂಸ್ಥಾಪಕ ಹಾಗೂ ಮುಖ್ಯಸ್ಥ ನಟ ವಿಜಯ್ ರವಿವಾರದಿಂದ ತಮ್ಮ ರಾಜಕೀಯ ಚಟುವಟಿಕೆಯನ್ನು ಪುನಾರಂಭಿಸುತ್ತಿದ್ದು, ಕಾಂಚೀಪುರಂ ಜಿಲ್ಲೆಯ ಸಮೀಪ ಒಳಾಂಗಣ ಕಾರ್ಯಕ್ರಮದಲ್ಲಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಎರಡು ತಿಂಗಳ ನಂತರ ಇದೇ ಮೊದಲ ಬಾರಿಗೆ ವಿಜಯ್ ಜನರನ್ನುದ್ದೇಶಿಸಿ ಮಾತನಾಡಲಿದ್ದು, ಕಾರ್ಯಕ್ರಮವು ಸುಗಮವಾಗಿ ನಡೆಯಲು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಕಾರ್ಯಕ್ರಮವು ಕಾಂಚೀಪುರಂ ಜಿಲ್ಲೆಯ ಸುಂಗುವರ್ಚತ್ತಿರಂನಲ್ಲಿರುವ ಖಾಸಗಿ ಶೈಕ್ಷಣಿಕ ಸಂಸ್ಥೆಯೊಂದರ ಆವರಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಸುಮಾರು 1,500 ಪಾಸ್ ಗಳನ್ನು ವಿತರಿಸಲಾಗಿದ್ದು, ಪಾಸ್ ಇದ್ದವರಿಗೆ ಮಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಪಕ್ಷದ ಕಾರ್ಯಕರ್ತರು ಕಡು ಹಳದಿ ಬಣ್ಣದ ಟಿ-ಶರ್ಟ್ ಗಳು ಹಾಗೂ ಕ್ಯಾಪ್ ಗಳನ್ನು ಧರಿಸಲಿದ್ದಾರೆ. ಅವರಿಗೆ ಜನಜಂಗುಳಿಯನ್ನು ನಿಯಂತ್ರಿಸುವ ಹಾಗೂ ನಿರ್ವಹಿಸುವ ತರಬೇತಿಯನ್ನು ನಿವೃತ್ತ ಪೊಲೀಸ್ ಅಧಿಕಾರಿಗಳು ನೀಡಿದ್ದಾರೆ.

ಇದಕ್ಕೂ ಮುನ್ನ, ಕಳೆದ ತಿಂಗಳು ನಟ ವಿಜಯ್ ಕರೂರು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬದ ಸದಸ್ಯರನ್ನು ಮಾಮಲ್ಲಪುರಂನಲ್ಲಿನ ರೆಸಾರ್ಟ್ ಒಂದರಲ್ಲಿ ಭೇಟಿಯಾಗಿದ್ದರು ಹಾಗೂ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News