ತಮಿಳುನಾಡಿನ ದಿಂಡಿಗಲ್ ಪಟಾಕಿ ಘಟಕದಲ್ಲಿ ಸ್ಫೋಟ: ಇಬ್ಬರು ಮೃತ್ಯು
Update: 2024-08-25 21:58 IST
Photo Credit: thehindu
ದಿಂಡಿಗಲ್ : ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ನಾಥಮ್ ಬಳಿ ಘಟನೆ ನಡೆದಿದ್ದು, ಘಟಕದ ಮಾಲೀಕರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಬಲಿಯಾದವರನ್ನು ಕಣ್ಣನ್ ಮತ್ತು ಮುನೀಶ್ವರನ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಶಿವಕಾಶಿಯವರು. ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಮೃತರ ಕುಟುಂಬಗಳಿಗೆ ತಲಾ ಮೂರು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.