ವಿಧಾನಸಭಾ ಉಪಚುನಾವಣೆ | ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್ ಗೆ ಭರ್ಜರಿ ಜಯ
Update: 2025-06-23 12:34 IST
ಆರ್ಯಾದನ್ ಶೌಕತ್ (Photo:X/@vdsatheesan)
ಹೊಸದಿಲ್ಲಿ : ಪಂಜಾಬ್, ಪಶ್ಚಿಮ ಬಂಗಾಳ, ಗುಜರಾತ್ ಮತ್ತು ಕೇರಳ ರಾಜ್ಯದ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಕೇರಳದ ನಿಲಂಬೂರಿನಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್(ಯುಡಿಎಫ್) ಅಭ್ಯರ್ಥಿ ಭರ್ಜರಿ ಜಯ ಗಳಿಸಿದ್ದಾರೆ.
ಕೇರಳದ ನಿಲಂಬೂರ್ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್ ಅವರು ಎಲ್‌ಡಿಎಫ್ ಅಭ್ಯರ್ಥಿ ಎಂ. ಸ್ವರಾಜ್ ವಿರುದ್ಧ 10,000 ಕ್ಕೂ ಅಧಿಕ ಮತಗಳಿಂದ ಜಯ ಗಳಿಸಿದ್ದಾರೆ.
ಈ ಕ್ಷೇತ್ರ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರತಿನಿಧಿಸುವ ವಯನಾಡ್ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ.