×
Ad

ಉಮೇಶ್ ಪಾಲ್ ಹತ್ಯೆ ಪ್ರಕರಣ: ಹತ್ಯೆಗೀಡಾದ ಅತೀಕ್ ಅಹ್ಮದ್ ನ ವಕೀಲನ ಬಂಧನ

Update: 2023-07-30 11:04 IST

ಅತೀಕ್ ಅಹ್ಮದ್ (PTI)

ಹೊಸದಿಲ್ಲಿ: ಬಿಎಸ್ ಪಿ ಮಾಜಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೀಡಾದ ದರೋಡೆಕೋರ ಅತೀಕ್ ಅಹ್ಮ ದ್ ನ ವಕೀಲನನ್ನು ಉತ್ತರ ಪ್ರದೇಶ ಪೊಲೀಸರು ಇಂದು ಬಂಧಿಸಿದ್ದಾರೆ.

ಶೂಟರ್ ಉಮೇಶ್ ಪಾಲ್ ಇರುವ ಸ್ಥಳ ಸುಳಿವನ್ನು ವಕೀಲ ವಿಜಯ್ ಮಿಶ್ರಾ ನೀಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶನಿವಾರ ತಡರಾತ್ರಿ ಲಕ್ನೋದ ಹೊಟೇಲ್ ಹಯಾತ್ ಲೆಗಸಿಯಿಂದ ಮಿಶ್ರಾನನ್ನು ಬಂಧಿಸಲಾಗಿದೆ.

ಹಗಲು ಹೊತ್ತಿನಲ್ಲಿ ಉಮೇಶ್ ಪಾಲ್ ಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಘಟನೆಯ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಮಾಫಿಯಾವನ್ನು ನಾಶಪಡಿಸುವುದಾಗಿ ರಾಜ್ಯ ವಿಧಾನಸಭೆಯಲ್ಲಿ ಪ್ರತಿಜ್ಞೆ ಮಾಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News