×
Ad

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮಧ್ಯೆ ರಶ್ಯಾದಿಂದ ತೈಲ ಖರೀದಿಗೆ ಭಾರತಕ್ಕೆ 30 ದಿನಗಳ ತಾತ್ಕಾಲಿಕ ವಿನಾಯಿತಿ ನೀಡಿದ ಅಮೆರಿಕ

Update: 2026-03-06 12:05 IST

Photo | NDTV

ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ಮಧ್ಯೆ ರಶ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಲು ಭಾರತಕ್ಕೆ ಅಮೆರಿಕ ತಾತ್ಕಾಲಿಕ ವಿನಾಯಿತಿ ನೀಡಿದೆ. ಜಾಗತಿಕ ಇಂಧನ ಪೂರೈಕೆಯನ್ನು ಸ್ಥಿರಗೊಳಿಸುವ ಗುರಿಯನ್ನು ಈ ಕ್ರಮ ಹೊಂದಿದೆ ಎಂದು ವರದಿಯಾಗಿದೆ.

ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, "ಖಜಾನೆ ಇಲಾಖೆಯು ಭಾರತೀಯ ಸಂಸ್ಕರಣಾಗಾರಗಳಿಗೆ ಸೀಮಿತ ಅವಧಿಗೆ ರಶ್ಯಾದ ಕಚ್ಚಾ ತೈಲವನ್ನು ಖರೀದಿಸಲು ಅನುಮತಿಸುತ್ತದೆ" ಎಂದು ಹೇಳಿದ್ದಾರೆ.

ಜಾಗತಿಕ ಮಾರುಕಟ್ಟೆಗೆ ತೈಲ ಸರಬರಾಜಿಗೆ ನಿರಂತರವಾಗಿ ಅವಕಾಶ ಕಲ್ಪಿಸಲು, ಭಾರತೀಯ ರಿಫೈನರಿಗಳಿಗೆ ರಷ್ಯಾದಿಂದ ತೈಲ ಖರೀದಿಸಲು ತಾತ್ಕಾಲಿಕವಾಗಿ 30 ದಿನಗಳ ವಿನಾಯಿತಿ ನೀಡುತ್ತಿದ್ದೇವೆ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ತಿಳಿಸಿದ್ದಾರೆ.

ಭಾರತವು ಅಮೆರಿಕದ ಅತ್ಯಗತ್ಯ ಪಾಲುದಾರ. ಭವಿಷ್ಯದಲ್ಲಿ ಭಾರತವು ಅಮೆರಿಕದಿಂದ ಇಂಧನ ಆಮದುಗಳನ್ನು ಹೆಚ್ಚಿಸುತ್ತದೆ ಎಂದು ಅಮೆರಿಕ ನಿರೀಕ್ಷಿಸುತ್ತದೆ ಎಂದು ಸ್ಕಾಟ್ ಬೆಸೆಂಟ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News