×
Ad

ಮುಂದಿನ ಎಲ್ಲಾ ಚುನಾವಣೆಯಲ್ಲೂ NCP ಚಿಹ್ನೆ, ಹೆಸರು ಬಳಕೆ: ಅಜಿತ್‌ ಪವಾರ್‌

Update: 2023-07-02 19:22 IST

ಫೋಟೋ: twitter.com/AjitPawarSpeaks

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು, ದೇಶದ ಅಭಿವೃದ್ಧಿಗಾಗಿ ಏಕನಾಥ್ ಶಿಂಧೆ ಸರ್ಕಾರದ ಜೊತೆ ಸೇರಿಕೊಳ್ಳಲು ತಮ್ಮ ಪಕ್ಷ ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದ ಅವರು, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಲ್ಲಿ (NCP) ಯಾವುದೇ ಒಡಕು ಇಲ್ಲ, ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಎನ್‌ಸಿಪಿ ಹೆಸರು ಮತ್ತು ಚಿಹ್ನೆಯ ಮೇಲೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

(ಪಕ್ಷದ) ಎಲ್ಲಾ ಚುನಾಯಿತ ಪ್ರತಿನಿಧಿಗಳು ಸರ್ಕಾರಕ್ಕೆ ಸೇರುವ ನಿರ್ಧಾರವನ್ನು ಬೆಂಬಲಿಸಿದ್ದಾರೆ ಎಂದು ಪವಾರ್ ಹೇಳಿದರು.

ಬಿಜೆಪಿಯೊಂದಿಗೆ ಅಧಿಕಾರ ಹಂಚಿಕೊಳ್ಳುವ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಅವರು, "ನಾವು ಶಿವಸೇನೆಯೊಂದಿಗೆ ಅಧಿಕಾರ ಸೇರಬಹುದಾದರೆ, ಬಿಜೆಪಿಯೊಂದಿಗೆ ಕೂಡಾ ಸೇರಬಹುದು" ಎಂದು ಹೇಳಿದ್ದಾರೆ.

"ಒಟ್ಟಾರೆ ಮತ್ತು ಸಮಗ್ರ ಅಭಿವೃದ್ಧಿಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ನಮಗೆ ಆಡಳಿತದ ಅಪಾರ ಅನುಭವವಿದೆ, ನಾವು ಅದನ್ನು ಒಳ್ಳೆಯದಕ್ಕೆ ಬಳಸಿಕೊಳ್ಳಬಹುದು. ಒಂದೆರಡು ದಿನಗಳಲ್ಲಿ ಕ್ಯಾಬಿನೆಟ್ ಖಾತೆಗಳನ್ನು ಪ್ರಕಟಿಸಲಾಗುವುದು” ಎಂದು ಪವಾರ್ ಹೇಳಿದ್ದಾರೆ.

ಎನ್‌ಸಿಪಿ ಪಕ್ಷದ ನಾಯಕ ಶರದ್‌ ಪವಾರ್ ಜತೆಗಿನ ವೈಮನಸ್ಸಿನ ಬಳಿಕ ಅಜಿತ್‌ ಪವಾರ್‌ ಅವರು ಶಿಂಧೆ ನೇತೃತ್ವದ ಸರ್ಕಾರವನ್ನು ಸೇರಿಕೊಂಡಿದ್ದು, ವಿಪಕ್ಷ ನಾಯಕನ ಸ್ಥಾನಕ್ಕೆ ರಾಜಿನಾಮೆ ನೀಡಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News