×
Ad

ಉತ್ತರ ಪ್ರದೇಶ | ‘ಜೈ ಶ್ರೀರಾಮ್ʼ ಘೋಷಣೆ ಕೂಗುವಂತೆ ಬಲವಂತಪಡಿಸಿ ದಲಿತ ಬಾಲಕನಿಗೆ ಹಲ್ಲೆ

Update: 2024-10-21 22:03 IST

ಸಾಂದರ್ಭಿಕ ಚಿತ್ರ

ಕಾನ್ಪುರ : ಇನ್ಸ್ಟಾ ಗ್ರಾಂ ಸ್ಟೇಟಸ್ನಲ್ಲಿ ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಹಾಕಿಕೊಂಡ ಕಾರಣಕ್ಕೆ ವಿದ್ಯಾರ್ಥಿಗಳ ಗುಂಪೊಂದು 16 ವರ್ಷದ ದಲಿತ ಬಾಲಕನಿಗೆ ಹಲ್ಲೆ ನಡೆಸಿ, ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವಂತೆ ಬಲವಂತಪಡಿಸಿದ ಘಟನೆ ಕಾನ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.

ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ಬಳಿಕ ಪೊಲೀಸರು ಭಾರತೀಯ ನ್ಯಾಯ ಸಂಹಿತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದ ಇನ್ಸ್ಟಾಗ್ರಾಂ ಸ್ಟೇಟಸ್ ಅನ್ನು ನೋಡಿದ ಬಳಿಕ ವಿದ್ಯಾರ್ಥಿಗಳ ಗುಂಪು ದಲಿತ ಸಮುದಾಯಕ್ಕೆ ಸೇರಿದ ಬಾಲಕನಿಗೆ ಹಲ್ಲೆ ನಡೆಸಿದ ಎಂದು ಪೊಲೀಸ್ ಉಪ ಆಯುಕ್ತ (ಘಾಟಂಪುರ) ರಂಜಿತ್ ಕುಮಾರ್ ತಿಳಿಸಿದ್ದಾರೆ.

ಬಳಿಕ ಬಾಲಕ ‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಬಲವಂತಪಡಿಸಿದೆ. ಆತನ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದೆ. ಈ ಘಟನೆ ಕುರಿತಂತೆ ತನಿಖೆ ಆರಂಭಿಸಲಾಗಿದೆ. ಇದುವರೆಗೆ ಯಾರನ್ನೂ ಬಂಧಿಸಿಲ್ಲ ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News