×
Ad

ಉತ್ತರ ಪ್ರದೇಶ | ಪತ್ರಕರ್ತನನ್ನು ಇರಿದು ಹತ್ಯೆ : ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

Update: 2025-10-24 10:46 IST

ಸಾಂದರ್ಭಿಕ ಚಿತ್ರ | hindustantimes

ಪ್ರಯಾಗ್‌ರಾಜ್‌: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ ಹೋಟೆಲ್‌ವೊಂದರ ಬಳಿ ಪತ್ರಕರ್ತನೋರ್ವನನ್ನು ಅಪರಿಚಿತ ದುಷ್ಕರ್ಮಿಗಳು ಇರಿದು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಲಕ್ಷ್ಮಿ ನಾರಾಯಣ್ ಸಿಂಗ್ ಹತ್ಯೆಯಾದ ಪತ್ರಕರ್ತ.

“ಹರ್ಷ್ ಹೊಟೇಲ್ ಬಳಿ ಲಕ್ಷ್ಮಿ ನಾರಾಯಣ್ ಸಿಂಗ್ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸ್ವರೂಪ್ ರಾಣಿ ನೆಹರು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಲಕ್ಷ್ಮಿ ನಾರಾಯಣ್ ಸಿಂಗ್ ಅವರು ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷ ಅಶೋಕ್ ಸಿಂಗ್ ಅವರ ಸೋದರಳಿಯ" ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ(ಎಡಿಸಿಪಿ) ಪುಷ್ಕರ್ ವರ್ಮಾ ತಿಳಿಸಿದ್ದಾರೆ.

ತಡರಾತ್ರಿ ಆರೋಪಿಯ ಕಾಲಿಗೆ ಗುಂಡಿಕ್ಕಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯಲ್ಲಿ ಭಾಗಿಯಾಗಿರುವ ಮತ್ತೊಬ್ಬ ಆರೋಪಿಯನ್ನು ಪತ್ತೆಹಚ್ಚುವ ಪ್ರಯತ್ನ ನಡೆಯುತ್ತಿವೆ. ಪ್ರಾಥಮಿಕ ತನಿಖೆಯು ಆರೋಪಿ ಮತ್ತು ಮೃತ ಪತ್ರಕರ್ತನ ಮಧ್ಯೆ ಇತ್ತೀಚೆಗೆ ಜಗಳವಾಗಿತ್ತು ಎಂದು ತಿಳಿದು ಬಂದಿದೆ.  ಈ ಕುರಿತು ತನಿಖೆ ಬಳಿಕ ನಿಖರವಾದ ಮಾಹಿತಿ ಹೊರ ಬರಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News