×
Ad

ಉತ್ತರಾಖಂಡದಲ್ಲಿ ಕಮರಿಗೆ ಬಿದ್ದ ಬಸ್: ಮೃತರ ಸಂಖ್ಯೆ 36ಕ್ಕೆ ಏರಿಕೆ

Update: 2024-11-04 15:42 IST

Screengrab:X/@ANI

ಉತ್ತರಾಖಂಡ: ಅಲ್ಮೋರಾದಲ್ಲಿ ಬಸ್ ಕಮರಿಗೆ ಬಿದ್ದು ಸಂಭವಿಸಿದ ಅಪಘಾತದಲ್ಲಿ ಮೃತರ ಸಂಖ್ಯೆ 36ಕ್ಕೆ ಏರಿಕೆಯಾಗಿದ್ದು, 19 ಮಂದಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನೆ ಬಗ್ಗೆ ಆಘಾತವನ್ನು ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 1ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಕುಮಾನ್ ವಿಭಾಗದ ಆಯುಕ್ತರಿಗೆ ಸೂಚಿಸಿದ್ದಾರೆ.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ನೆರವು ಘೋಷಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News