×
Ad

ಉತ್ತರಾಖಂಡ: ಟ್ರಾನ್ಸ್ ಫಾರ್ಮರ್ ಸ್ಫೋಟ, ಪೊಲೀಸ್ ಇನ್ಸ್ ಪೆಕ್ಟರ್ ಸಹಿತ 15 ಮಂದಿ ಮೃತ್ಯು

Update: 2023-07-19 13:44 IST

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯ ಅಲಕನಂದಾ ನದಿಯ ದಡದಲ್ಲಿ ವಿದ್ಯುತ್ ಪರಿವರ್ತಕ(ಟ್ರಾನ್ಸ್ ಫಾರ್ಮರ್ ) ಸ್ಫೋಟಗೊಂಡ ಪರಿಣಾಮ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಪರಿಣಾಮ ಸೇತುವೆಯೊಂದಕ್ಕೆ ವಿದ್ಯುತ್ ಪ್ರವಹಿಸಿ ಓರ್ವ ಪೊಲೀಸ್ ಹಾಗೂ ಮೂವರು ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ನಮಾಮಿ ಗಂಗೆ ಯೋಜನೆಯ ಭಾಗವಾಗಿರುವ ಈ ಸೇತುವೆಯು ಉತ್ತರಾಖಂಡದ ಚಮೋಲಿ ಜಿಲ್ಲೆಯ ಅಲಕನಂದಾ ನದಿಗೆ ಅಡ್ಡಲಾಗಿ ಕಟ್ಟಲಾಗಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಮಾತನಾಡಿ, "ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮತ್ತು ಮೂವರು ಗೃಹ ರಕ್ಷಕರು ಸೇರಿದಂತೆ 15 ಜನರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಘಟನೆಯ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಸಲಾಗುತ್ತಿದೆ" ಎಂದು ಹೇಳಿದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News