×
Ad

ವಾರಣಾಸಿ | ಕಾಮಿಡಿಯನ್‌ ಶ್ಯಾಮ್ ರಂಗೀಲಾ ಅವರ ನಾಮಪತ್ರ ತಿರಸ್ಕೃತ

Update: 2024-05-15 21:47 IST

ಶ್ಯಾಮ್ ರಂಗೀಲಾ | PC : X/ @ShyamRangeela

ವಾರಣಾಸಿ: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲಿದ್ದ ಕಾಮಿಡಿಯನ್‌ ಶ್ಯಾಮ್ ರಂಗೀಲಾ ಅವರ ನಾಮಪತ್ರ ತಿರಸ್ಕೃತವಾಗಿದೆ. ನಾಮಪತ್ರಕ್ಕೆ ಅಗತ್ಯವಿದ್ದ ಅಫಿದಾವತ್ ಸಲ್ಲಿಸಲು ರಂಗೀಲಾ ವಿಫಲರಾಗಿದ್ದರಿಂದ ಅವರ ನಾಮಪತ್ರ ತಿರಸ್ಕೃತವಾಗಿದೆ ಎಂದು ಮೂಲಗಳು ತಿಳಿಸಿವೆ.

ಮೇ.14ರಂದು ಶ್ಯಾಮ್ ರಂಗೀಲಾ ಅವರು ನಾಮಪತ್ರ ಸಲ್ಲಿಸಿದ್ದರು. ಮೊದಲು ಮೇ.10ಕ್ಕೆ ಅವರಿಗೆ ನಾಮಪತ್ರ ಸಲ್ಲಿಸಲು ಅಗತ್ಯವಿದ್ದ ಅರ್ಜಿಗಳನ್ನು ನೀಡುತ್ತಿಲ್ಲ ಎಂದು ಆರೋಪಿಸಿದ್ದ ಕಾಮಿಡಿಯನ್ ಶ್ಯಾಮ್ ರಂಗೀಲಾ, ಬಳಿಕ ನಾಮಪತ್ರ ಸಲ್ಲಿಸಲು ಅವಕಾಶವೇ ಸಿಗುತ್ತಿಲ್ಲ ಎಂದು ಮೇ.13ರಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.   

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News