Screengrab : X 

ಪುಣೆ: ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಗುಂಪಿನ ಮೇಲೆ ವೇಗವಾಗಿ ಬಂದ ಟ್ರಕ್ ಹರಿದ ಪರಿಣಾಮ ಮೂವರು ಮೃತಪಟ್ಟಿದ್ದು, ಇತರ 6 ಮಂದಿ ಗಾಯಗೊಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಿಸಿಟಿವಿಯಲ್ಲಿ ಟ್ರಕ್ ವಿದ್ಯಾರ್ಥಿಗಳ ಮೇಲೆ ಹರಿದು ಬಳಿಕ ವೇಗವಾಗಿ ಮುಂದಕ್ಕೆ ಸಾಗುವುದು ಸೆರೆಯಾಗಿದೆ. ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ನೆರವಾಗಲು ಜನರು ಘಟನಾ ಸ್ಥಳದತ್ತ ಧಾವಿಸುವುದೂ ಕಂಡುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆಯುವ ಮೊದಲು ಟ್ರಕ್ ಚಾಲಕ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಅಪಘಾತಕ್ಕೆ ಕಾರಣವಾದ ಸಂದರ್ಭಗಳ ಕುರಿತು ತನಿಖೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ

contributor

ಇರ್ಷಾದ್ ಎಂ. ವೇಣೂರು ಅವರು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದು, ಪತ್ರಿಕೋದ್ಯಮ ಕ್ಷೇತ್ರದಲ್ಲಿ 13 ವರ್ಷಗಳ ಅನುಭವ ಹೊಂದಿದ್ದಾರೆ. ಪ್ರಸ್ತುತ ‘ವಾರ್ತಾಭಾರತಿ’ಯಲ್ಲಿ ಡಿಜಿಟಲ್ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಡೆಕ್ಕನ್ ಹೆರಾಲ್ಡ್–ಪ್ರಜಾವಾಣಿ’ ಸಮೂಹದಲ್ಲಿ ಫೋಟೊ ಜರ್ನಲಿಸ್ಟ್ ಆಗಿಯೂ ಕೆಲಸ ಮಾಡಿದ್ದಾರೆ. ಅಂತರರಾಷ್ಟ್ರೀಯ ವಿದ್ಯಮಾನಗಳು, ಮಧ್ಯಪ್ರಾಚ್ಯದ ಸಂಘರ್ಷಗಳು, ಗಲ್ಫ್ ರಾಷ್ಟ್ರಗಳ ಬೆಳವಣಿಗೆಗಳು, ರಾಜಕೀಯ, ವಾಯುಯಾನ, ಅಪರಾಧ ಮತ್ತು ಕ್ರೀಡೆ ಅವರ ಆಸಕ್ತಿಯ ಸುದ್ದಿ ಕ್ಷೇತ್ರಗಳಾಗಿವೆ.