×
Ad

ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ; ಇಂದು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

Update: 2024-09-06 14:59 IST

Photo: :X/ @IndiaToday

ಹೊಸದಿಲ್ಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಹಿರಿಯ ನಾಯಕರನ್ನು ರಾಜಾಜಿ ಮಾರ್ಗದಲ್ಲಿ ಭೇಟಿಯಾಗಿದ್ದಾರೆ.

ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಪಕ್ಷಕ್ಕೆ ಸೇರುತ್ತಿದ್ದಾರೆ. ಅವರಲ್ಲಿ ಒಬ್ಬರು ಸ್ಪರ್ಧಿಸುತ್ತಾರೆಯೇ ಅಥವಾ ಇಬ್ಬರೂ ಸ್ಪರ್ಧಿಸುತ್ತಾರೆಯೇ ಎಂಬುದು ಶೀಘ್ರದಲ್ಲೇ ಸ್ಪಷ್ಟವಾಗುತ್ತದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News