×
Ad

ಹರ್ಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಸ್ಪರ್ಧೆ: ವರದಿ

Update: 2024-09-04 12:53 IST

Photo credit: PTI

ಹೊಸದಿಲ್ಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಮುಂದಿನ ತಿಂಗಳು ನಡೆಯಲಿರುವ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು NDTV ವರದಿ ಮಾಡಿದೆ.

ವಿನೇಶ್ ಫೋಗಟ್ ಅವರು ಜನನಾಯಕ್ ಜನತಾ ಪಕ್ಷದ ಅಮರ್‌ಜೀತ್ ಧಂಡಾ ಪ್ರತಿನಿಧಿಸುವ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸುವ ನಿರೀಕ್ಷೆಯಿದೆ. ಬಜರಂಗ್ ಪುನಿಯಾ ಅವರು ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಇನ್ನೂ ಮಾಹಿತಿಯನ್ನು ನೀಡಲಾಗಿಲ್ಲ ಎಂದು ವರದಿಯಾಗಿದೆ.

ಇಬ್ಬರೂ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಯಾವುದೇ ಮಾಹಿತಿ ಈವರೆಗೆ ನೀಡಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News