ವಕ್ಫ್ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಪೀಠ ನಡೆಸುವುದಿಲ್ಲ : ಸುಪ್ರೀಂ ಕೋರ್ಟ್
Update: 2025-05-05 14:51 IST
Photo | PTI
ಹೊಸದಿಲ್ಲಿ : ವಕ್ಫ್ ತಿದ್ದುಪಡಿ ಕಾಯ್ದೆ- 2025ರ ಸಾಂವಿಧಾನಿಕತೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಈ ಪ್ರಕರಣವನ್ನು ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು ವಿಚಾರಣೆ ನಡೆಸಲಿದೆ.
ಸಿಜೆಐ ಖನ್ನಾ ಅವರು ಮೇ 13ರಂದು ತಮ್ಮ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ. ಮಧ್ಯಂತರ ಆದೇಶವನ್ನು ಹೊರಡಿಸಲು ಈ ವಿಷಯದಲ್ಲಿ ದೀರ್ಘ ವಿಚಾರಣೆಯ ಅಗತ್ಯವಿರುವುದರಿಂದ ವಿಚಾರಣೆಯನ್ನು ಬಿ.ಆರ್. ಗವಾಯಿ ನೇತೃತ್ವದ ಪೀಠಕ್ಕೆ ವರ್ಗಾಯಿಸಿದೆ. ನೂತನ ಸಿಜೆಐ ನೇತೃತ್ವದ ಪೀಠ ಈ ಕುರಿತು ಮೇ.15ರಂದು ವಿಚಾರಣೆ ನಡೆಸಲಿದೆ.