ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕತೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ಮೇ.15ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್
Update: 2025-05-05 14:31 IST
ಹೊಸದಿಲ್ಲಿ : ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ಮೇ.15ಕ್ಕೆ ಮುಂದೂಡಿಕೆ ಮಾಡಿದೆ.
ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಸೋಮವಾರ ವಿಚಾರಣೆ ನಡೆಸುವುದಕ್ಕೆ ನಿಗದಿಪಡಿಸಿತ್ತು.