×
Ad

ದಿಲ್ಲಿಯಲ್ಲಿ ನೀರಿನ ಬಿಕ್ಕಟ್ಟು | ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

Update: 2024-06-25 10:06 IST

PC: x.com/ETVBharatMA

ಹೊಸದಿಲ್ಲಿ : ಕಳೆದ ನಾಲ್ಕು ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದಿಲ್ಲಿ ಜಲ ಸಚಿವೆ ಅತಿಶಿ ಅವರ ಆರೋಗ್ಯ ಮಂಗಳವಾರ ಬೆಳಗಿನ ಜಾವ ಹದಗೆಟ್ಟಿದ್ದರಿಂದ ಅವರನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ಕರೆತರಲಾಯಿತು.

ಅನಿರ್ದಿಷ್ಟಾವಧಿ ಉಪವಾಸ ಸೋಮವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದರಿಂದ ಅತಿಶಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದರು. ಹರಿಯಾಣವು ದಿಲ್ಲಿಯ ನೀರಿನ ಸರಿಯಾದ ಪಾಲನ್ನು ಬಿಡುಗಡೆ ಮಾಡುವವರೆಗೂ ತಮ್ಮ ಆರೋಗ್ಯ ಹದಗೆಟ್ಟರೂ ಅತಿಶಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ನಿರಾಕರಿಸಿದ್ದರು.

“ನನ್ನ ರಕ್ತದೊತ್ತಡ ಮತ್ತು ಸಕ್ಕರೆ ಮಟ್ಟವು ಕುಸಿಯುತ್ತಿದೆ. ತೂಕವೂ ಕಡಿಮೆಯಾಗಿದೆ. ನನ್ನ ದೇಹವು ಎಷ್ಟೇ ನರಳಿದರೂ ಹರಿಯಾಣ ನೀರು ಬಿಡುವವರೆಗೆ ನಾನು ಉಪವಾಸವನ್ನು ಮುಂದುವರಿಸುತ್ತೇನೆ” ಎಂದು ಜಂಗ್‌ಪುರದ ಭೋಗಲ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಅತಿಶಿ ಹೇಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News