×
Ad

ಮೂರು ಭಾರತೀಯ ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಪಾಕ್

Update: 2025-05-07 10:24 IST

ಖವಾಜಾ ಆಸಿಫ್ | PC : PTI

ಹೊಸದಿಲ್ಲಿ : ಭಾರತದ ಮೂರು ರಫೇಲ್ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿದೆ ಎಂದು ಪಾಕಿಸ್ತಾನದ ಮಿಲಿಟರಿ ವಕ್ತಾರರು ರಾಯಿಟರ್ಸ್‌ಗೆ ತಿಳಿಸಿರುವ ಬಗ್ಗೆ livemint ವರದಿ ಮಾಡಿದೆ.

ʼಪಾಕ್‌ ಸೇನೆಯು ಐದು ಭಾರತೀಯ ಜೆಟ್‌ಗಳನ್ನು ಹೊಡೆದುರುಳಿಸಿದೆ ಮತ್ತು ಕೆಲ ಭಾರತೀಯ ಸೈನಿಕರನ್ನು ಸೆರೆಹಿಡಿದಿದೆʼ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಹೇಳಿರುವ ಬಗ್ಗೆ Bloomberg ವರದಿ ಮಾಡಿದೆ.

ʼಕಳೆದ ಹದಿನೈದು ದಿನಗಳಿಂದ ನಾವು ಭಾರತದ ವಿರುದ್ಧ ಯಾವುದೇ ಪ್ರತಿಕೂಲ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳುತ್ತಿದ್ದೇವೆ. ಆದರೆ ಭಾರತ ದಾಳಿ ಮಾಡಿದರೆ, ನಾವು ಪ್ರತಿಕ್ರಿಯಿಸುತ್ತೇವೆ. ಭಾರತ ಹಿಂದೆ ಸರಿದರೆ, ನಾವು ಖಂಡಿತವಾಗಿಯೂ ವಿರಾಮಗೊಳಿಸುತ್ತೇವೆʼ ಎಂದು ಆಸಿಫ್ ಹೇಳಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ʼಆಪರೇಷನ್ ಸಿಂಧೂರ್’ ಎಂಬ ಹೆಸರಿನ ಕಾರ್ಯಾಚರಣೆಯಲ್ಲಿ, ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದೆ. ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಮಹಾನಿರ್ದೇಶಕರ ಪ್ರಕಾರ, ಭಾರತ ಪಾಕಿಸ್ತಾನದ 6 ಸ್ಥಳಗಳ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ 8 ಜನರು ಮೃತಪಟ್ಟು 22 ಜನರು ಗಾಯಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News