West Bengal | ಹೊಟೇಲ್‌ನಲ್ಲಿ ಅಗ್ನಿ ಅವಘಡ: 7 ಯಾತ್ರಾರ್ಥಿಗಳು ಮೃತ್ಯು
Update: 2026-08-17 10:50 IST
Photo |ndtv
ತಾರಾಪೀಠ: ಪಶ್ಚಿಮ ಬಂಗಾಳದ ಬಿರ್ಭೂಮ್ ನಲ್ಲಿನ ಹೋಟೆಲ್‌ವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಮಂದಿ ಮೃತಟ್ಟು, ಹಲವರು ಗಾಯಗೊಂಡಿದ್ದಾರೆ.
ತಾರಾಪೀಠದಲ್ಲಿನ ನಾಲ್ಕು ಅಂತಸ್ತಿನ ಹೋಟೆಲ್‌ವೊಂದರ ನೆಲ ಮಹಡಿಯಲ್ಲಿ ಸೋಮವಾರ ಮುಂಜಾನೆ ಸುಮಾರು 4.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬಹುತೇಕ ಅತಿಥಿಗಳು ನಿದ್ರಿಸುತ್ತಿದ್ದರು ಎನ್ನಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಗಾಯಾಳುಗಳನ್ನು ರಕ್ಷಿಸಲಾಗಿದ್ದು, ಚಿಕಿತ್ಸೆಗಾಗಿ ರಾಮ್ ಪುರಾಹತ್ ಸರಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಸಂಶಯಿಸಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು, ತನಿಖೆಯನ್ನು ಕೈಗೊಂಡಿದ್ದಾರೆ.