×
Ad

ಹೊಸ ಸಂಸತ್ತಿಗೆ ರಾಷ್ಟ್ರಪತಿಗೇಕೆ ಆಹ್ವಾನವಿಲ್ಲ; ತೃಣಮೂಲ ಕಾಂಗ್ರೆಸ್ ಪ್ರಶ್ನೆ

Update: 2023-09-19 23:34 IST

Photo: PTI 

ಹೊಸದಿಲ್ಲಿ: ನೂತನ ಸಂಸತ್ ಭವನಕ್ಕೆ ಸ್ಥಳಾಂತರಗೊಳ್ಳಲು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿದ್ದೀರೇ? ಎಂದು ತೃಣಮೂಲ ಕಾಂಗ್ರೆಸ್ ಮಂಗಳವಾರ ಪ್ರಶ್ನಿಸಿದೆ.

ಹಳೆಯ ಕಟ್ಟಡದ ಐತಿಹಾಸಿಕ ಸೆಂಟ್ರಲ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸ್ಫೀಕರ್ ಜಗದೀಪ್ ಧನಕರ್ ವಹಿಸಿದ್ದರು.

"ಸೆಂಟ್ರಲ್ ಹಾಲ್ ನಲ್ಲಿ (ಹಳೆಯ ಸಂಸತ್ತಿನ ಕಟ್ಟಡ) ಇಂದಿನ ಕಾರ್ಯಕ್ರಮದಲ್ಲಿ ಭಾರತದ ರಾಷ್ಟ್ರಪತಿಗಳು ಎಲ್ಲಿದ್ದರು? ಅವರನ್ನು ಆಹ್ವಾನಿಸಲಾಗಿದೆಯೇ? ಏಕೆ ಅವರನ್ನು ನಿರ್ಲಕ್ಷಿಸಲಾಗಿದೆ?" ಟಿಎಂಸಿ ನಾಯಕ ಡೆರೆಕ್ ಒಬ್ರಿಯಾನ್ ಪ್ರಶ್ನಿಸಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಹಳೆ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮೇ ತಿಂಗಳಲ್ಲಿ ಆಯೋಜಿಸಿದ್ದ ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿಯನ್ನು ಆಹ್ವಾನಿಸದಿರುವ ಬಗ್ಗೆ ವಿರೋಧ ಪಕ್ಷಗಳು ಈ ಹಿಂದೆಯೇ ಆಕ್ಷೇಪ ವ್ಯಕ್ತಪಡಿಸಿದ್ದವು. ಕನಿಷ್ಠ 21 ವಿರೋಧ ಪಕ್ಷಗಳು ಉದ್ಘಾಟನೆಯನ್ನು ಬಹಿಷ್ಕರಿಸಿದ್ದು, ಅಧ್ಯಕ್ಷ ಮುರ್ಮು ಅವರು ಹೊಸ ಕಟ್ಟಡವನ್ನು ಉದ್ಘಾಟಿಸಬೇಕೇ ಹೊರತು ಪ್ರಧಾನಿ ನರೇಂದ್ರ ಮೋದಿಯಲ್ಲ ಎಂದು ಪ್ರತಿಪಾದಿಸಿದ್ದವು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News