×
Ad

ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾದ ವ್ಯಕ್ತಿಯಿಂದ ಮಹಿಳೆ ಮೇಲೆ ಅತ್ಯಾಚಾರ

Update: 2023-07-26 08:55 IST

ಗುರುಗ್ರಾಮ: ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾದ ವ್ಯಕ್ತಿ ಹಾಗೂ ಆತನ ಸ್ನೇಹಿತ ಇಲ್ಲಿನ ಸೆಕ್ಟರ್ 50ರ ಹೋಟೆಲ್ ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ವರದಿಯಾಗಿದೆ.

ಜೂನ್ 29ರಂದು ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾದ ವ್ಯಕ್ತಿ ಆಹ್ವಾನಿಸಿದ್ದ ಹಿನ್ನೆಲೆಯಲ್ಲಿ ಹೋಟೆಲ್ಗೆ ತೆರಳಿದಾಗ ಇಬ್ಬರು ಕೊಟ್ಟ ತಿನಸುಗಳನ್ನು ತಿಂದ ಬಳಿಕ ಪ್ರಜ್ಞೆ ಕಳೆದುಕೊಂಡಿದ್ದಾಗಿ ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾಳೆ.

"ಈ ಸಂದರ್ಭದಲ್ಲಿ ನನ್ನ ಮೇಲೆ ಅತ್ಯಾಚಾರ ಎಸಗಿ ಕೃತ್ಯದ ವಿಡಿಯೊ ಕೂಡಾ ಚಿತ್ರೀಕರಿಸಿಕೊಂಡಿದ್ದಾರೆ. ಪ್ರಜ್ಞೆ ಮರುಕಳಿಸಿದಾಗ, ನಾನು ಪ್ರತಿರೋಧಿಸಿದೆ. ಆಗ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದರು. ಹೇಗೋ ತಪ್ಪಿಸಿಕೊಂಡು ಬಂದು ಇದೀಗ ಪೊಲೀಸರಿಗೆ ದೂರು ನೀಡಿದ್ದೇನೆ" ಎಂದು ಮಹಿಳೆ ತಿಳಿಸಿದ್ದಾಳೆ.

ಪ್ರಕರಣದ ಅಪರಿಚಿತ ವ್ಯಕ್ತಿಗಳ ವಿರುದ್ಧ ಸೆಕ್ಟರ್ 50 ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಂದು ಠಾಣಾಧಿಕಾರಿ ಪ್ರವೀಣ್ ಮಲಿಕ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News